
ನವದೆಹಲಿ: ರಾಜ್ಯಸಭೆ ಉಪ ಸಭಾಪತಿಯಾಗಿ ಜೆಡಿಯು ಸಂಸದ ಹರಿವಂಶ್ ನಾರಾಯಣ್ ಸಿಂಗ್ ಆಯ್ಕೆಯಾಗಿದ್ದಾರೆ.
ಧ್ವನಿಮತದ ಮೂಲಕ ಹರಿವಂಶ್ ನಾರಾಯಣ್ ಸಿಂಗ್ ಅವರನ್ನು ರಾಜ್ಯಸಭೆ ಉಪ ಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ.
ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ಹರಿವಂಶ್ ನಾರಾಯಣ್ ಸಿಂಗ್ ಸ್ಪರ್ಧಿಸಿದ್ದರು. ಇದೀಗ ಹರಿವಂಶ್ ಅವರು ಎರಡನೇ ಬಾರಿಗೆ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಉಪ ಸಭಾಪತಿಯಾಗಿ ಹರಿವಂಶ್ ನಾರಾಯಣ್ ಸಿಂಗ್ ಅವರು ಆಯ್ಕೆಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದರು. ಹರಿವಂಶ್ ಅವರು ಅದ್ಭುತ ಸಂಸದೀಯ ಪಟು ಎಂದು ಹೇಳಿದ್ದರು.
ಇನ್ನು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಸಹ ಹರಿವಂಶ್ ಅವರನ್ನು ಅಭಿನಂದಿಸಿದ್ದಾರೆ.
Advertisement