ಪ್ರಧಾನಿ 70ನೇ ಜನ್ಮದಿನ: ಮೋದಿ ಜೀವನ ಕುರಿತ ಪ್ರದರ್ಶನ ಉದ್ಘಾಟಿಸಿದ ಜೆಪಿ ನಡ್ಡಾ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ಮೋದಿಯ ಜೀವನ ಕುರಿತ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಜೆಪಿ ನಡ್ಡಾ
ಜೆಪಿ ನಡ್ಡಾ
Updated on: 

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ಮೋದಿಯ ಜೀವನ ಕುರಿತ ಪ್ರದರ್ಶನಕ್ಕೆ ಚಾಲನೆ ನೀಡಿದರು.

ದೆಹಲಿಯಲ್ಲಿರುವ ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಈ ಪ್ರದರ್ಶನ ಆಯೋಜಿಸಲಾಗಿದೆ.

ಪ್ರಧಾನಿ ಮೋದಿಯವರ ಜೀವನಕ್ಕೆ ಸಂಬಂಧಿಸಿದ 70 ಸ್ಲೈಡ್ ಗಳ ಸಾಕ್ಷ್ಯ ಚಿತ್ರವನ್ನು ಬಿಡುಗಡೆ ಮಾಡುವ ಅವಕಾಶ ಪಡೆದುಕೊಂಡಿದ್ದೇನೆ. ಎಲ್ಲಾ ಬಿಜೆಪಿ ಕಚೇರಿಗಳಲ್ಲಿ ಮೋದಿ ಅವರ ಜೀವನ ಕುರಿತಾದ ಸಾಕ್ಷ್ಯಚಿತ್ರ ನೋಡಲು ಕಾರ್ಯಕರ್ತರಿಗೆ ಲಭ್ಯವಿರಲಿದೆ ಎಂದು ನಡ್ಡಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

’ಸೆಪ್ಟಂಬರ್ 17ಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ 70 ವರ್ಷಗಳು ತುಂಬುತ್ತವೆ. ಅವರು ತಮ್ಮ ಜೀವನವನ್ನು ದೇಶದ ಜನರ ಸೇವೆಗಾಗಿ ಮೀಸಲಿಟ್ಟಿದ್ದಾರೆ. ಹೀಗಾಗಿ ಬಿಜೆಪಿ, ಸೆಪ್ಟೆಂಬರ್ 14 ರಿಂದ 20ರವರೆಗೆ ’ಸೇವಾ ಸಪ್ತಾಹ‌’ ಅಭಿಯಾನವನ್ನು ಆಚರಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com