ದೇಶ

ಆರ್ಯುವೇದ ವಿಧೇಯಕಕ್ಕೆ ರಾಜ್ಯಸಭೆ ಅಂಗೀಕಾರ

ಆರ್ಯುವೇದ ವಿಧೇಯಕಕ್ಕೆ ರಾಜ್ಯಸಭೆ ಅಂಗೀಕಾರ
ಕೇಂದ್ರ ಸಚಿವ ಹರ್ಷವರ್ಧನ್
Published On :

ನವದೆಹಲಿ: ಆಯುರ್ವೇದ ಬೋಧನಾ ಹಾಗೂ ಸಂಶೋಧನಾ ಸಂಸ್ಥೆ ವಿಧೇಯಕಕ್ಕೆ ರಾಜ್ಯಸಭೆ ಅಂಗೀಕಾರ ನೀಡಿದೆ. ಆಯುರ್ವೇದ ವಿಧೇಯಕದ ಮೇಲೆ ನಡೆದ ಚರ್ಚೆಯಲ್ಲಿ ವಿವಿಧ ಪಕ್ಷಗಳ ಸದಸ್ಯರು ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 

ವಿಧೇಯಕ ಕುರಿತು ಮಾತನಾಡಿದ  ಆರೋಗ್ಯ ಸಚಿವ ಡಾ.ಹರ್ಷವರ್ಧನ್   ವಿಧೇಯಕಕ್ಕೆ ಬೆಂಬಲ ಸೂಚಿಸಿದ ಎಲ್ಲ   ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು.   ಆಧುನಿಕ ವೈದ್ಯಕೀಯದಲ್ಲಿ ನಾನು ವೈದ್ಯನಾಗಿದ್ದರೂ, ಆಯುರ್ವೇದ ಜೊತೆಗೆ ಇತರ ಸಾಂಪ್ರದಾಯಿಕ ವೈದ್ಯಕೀಯ  ಪದ್ದತಿಗಳ ಬಗ್ಗೆ ಮೆಚ್ಚುಗೆಹೊಂದಿದ್ದೇನೆ ಎಂದು ಸಚಿವರು ಹೇಳಿದರು.  

ಗುಜರಾತ್ ಜಾಮ್ ನಗರದಲ್ಲಿ ಸ್ಥಾಪಿಸಲಿರುವ ಆರ್ಯುವೇದ ಸಂಸ್ಥೆ ಬಗ್ಗೆ ಸಚಿವರು ಸ್ಪಷ್ಟನೆ ನೀಡಿ, ದೇಶದ ಇತರ  ಆರ್ಯುವೇದ ಸಂಸ್ಥೆಗಳನ್ನು ನಾವು ಗೌರವಿಸುತ್ತೇವೆ. ದೇಶದಲ್ಲಿ 103 ಆರೋಗ್ಯ ಸಂಸ್ಥೆಗಳು ರಾಷ್ಟ್ರೀಯ ಪ್ರಾಮುಖ್ಯತೆ ಹೊಂದಿವೆ, ಜಾಮ್ ನಗರ್ ಆಯುರ್ವೇದ ಕಾಲೇಜಿಗೆ ರಾಷ್ಟ್ರೀಯ ಸ್ಥಾನಮಾನ ನೀಡುವಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು  ಸ್ಪಷ್ಟಪಡಿಸಿದರು. 

ಜಾಮ್ ನಗರದಲ್ಲಿರುವ ಈ ಸಂಸ್ಥೆ ಅತ್ಯಂತ ಹಳೆಯದು, ಇದನ್ನು ಸರ್ಕಾರ ಸ್ಥಾಪಿಸಿದೆ ಎಂದರು. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಕೆಲಸ ಮಾಡುವ ಏಕೈಕ ಆಯುರ್ವೇದ ಸಂಸ್ಥೆಯಾಗಿದೆ. ಹಾಗಾಗಿ ಈ ಸ್ಥಾನಮಾನ ಹೊಂದಲು ಸೂಕ್ತವಾಗಿದೆ ಎಂದರು. ಇತರ ಆಯುರ್ವೇದ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಿದ ನಂತರ ಅವುಗಳಿಗೂ ರಾಷ್ಟ್ರೀಯ ಪ್ರಾಮುಖ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.