ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ: ಇಕ್ಬಾಲ್ ಅನ್ಸಾರಿ ಮನವಿ

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಜಮೀನು ವಿವಾದದಲ್ಲಿ ಮುಸ್ಲಿಂ ಕಡೆಯಿಂದ ಪ್ರಮುಖ ಕಕ್ಷಿದಾರರಾದ ಇಸ್ಬಾಲ್ ಅನ್ಸಾರಿ ಗುರುವಾರ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಮನವಿ ಮಾಡುವುದರ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.
ಜೋಷಿ-ಅಡ್ವಾಣಿ-ಅನ್ಸಾರಿ
ಜೋಷಿ-ಅಡ್ವಾಣಿ-ಅನ್ಸಾರಿ
Updated on

ಅಯೋಧ್ಯೆ(ಉತ್ತರಪ್ರದೇಶ): ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಜಮೀನು ವಿವಾದದಲ್ಲಿ ಮುಸ್ಲಿಂ ಕಡೆಯಿಂದ ಪ್ರಮುಖ ಕಕ್ಷಿದಾರರಾದ ಇಸ್ಬಾಲ್ ಅನ್ಸಾರಿ ಗುರುವಾರ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಮನವಿ ಮಾಡುವುದರ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.

ವಿಶೇಷ ಸಿಬಿಐ ನ್ಯಾಯಾಲಯ ಸೆ. 30ರಂದು ತನ್ನ ತೀರ್ಪು ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ, ಮಾಜಿ ಕೇಂದ್ರ ಸಚಿವ ಡಾ. ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ ಎಲ್ಲಾ 32 ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.

‘ರಾಮಮಂದಿರ ನಿರ್ಮಾಣಕ್ಕಾಗಿ ಸುಪ್ರೀಂಕೋರ್ಟ್ ಇಡೀ ಜಮೀನು ನೀಡಿದೆ. ಅನೇಕ ಆರೋಪಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಆರೋಪಿಗಳು ವೃದ್ಧಾಪ್ಯದಲ್ಲಿರುವುದರಿಂದ ಅವರಿಗೆ ಈ ಸಮಯದಲ್ಲಿ ಶಿಕ್ಷೆ ವಿಧಿಸುವುದು ಸೂಕ್ತವಲ್ಲ ಸರಿಯಲ್ಲ ಎಂದು ಇಕ್ಬಾಲ್‍ ಅನ್ಸಾರಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

1992 ರಲ್ಲಿ ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಿಜೆಪಿ ನಾಯಕರು ವಿಚಾರಣೆ ಎದುರಿಸುತ್ತಿದ್ದಾರೆ. ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ ಸೇರಿದಂತೆ ಹಲವರನ್ನು ಅದಾಗಲೇ ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com