ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 97,894 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 51 ಲಕ್ಷ, 83,198 ಮಂದಿ ಸಾವು

ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ. ಒಂದೇ ದಿನ 97,894 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,18,254ಕ್ಕೆ ತಲುಪಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ. ಒಂದೇ ದಿನ 97,894 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,18,254ಕ್ಕೆ ತಲುಪಿದೆ. 

ಇನ್ನು ಒಂದೇ ದಿನ ದೇಶದಲ್ಲಿ ಬರೋಬ್ಬರಿ 1,132  ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 83,198ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ 51,18,254 ಮಂದಿ ಸೋಂಕಿತರ ಪೈಕಿ ಈ ವರೆಗೂ 40,25,080 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 10,09,976  ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಜಾಗತಿಕವಾಗಿ ಅತೀ ಹೆಚ್ಚು ಮಂದಿ ಗುಣಮುಖರಾದ ದೇಶಗಳ ಪೈಕಿ ಭಾರತವೂ ಒಂದೆನಿಸಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com