ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಹೈಕಮಾಂಡ್ ತೀರ್ಮಾನ: ಸಿಎಂ ಯಡಿಯೂರಪ್ಪ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಚೆರ್ಚೆ ನಡೆಸಲಾಗಿದೆ. ಪ್ರಧಾನಮಂತ್ರಿ ಅವರೊಂದಿಗೆ ರಾಷ್ಟ್ರೀಯ ಅಧ್ಯಕ್ಷರು ಚೆರ್ಚಿಸಿ ಅಂತಿಮ ತೀರ್ಮಾನ ತಿಳಿಸಲಿದ್ದಾರೆ...
ಯಡಿಯೂರಪ್ಪ
ಯಡಿಯೂರಪ್ಪ
Updated on: 

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಚೆರ್ಚೆ ನಡೆಸಲಾಗಿದೆ. ಪ್ರಧಾನಮಂತ್ರಿ ಅವರೊಂದಿಗೆ ರಾಷ್ಟ್ರೀಯ ಅಧ್ಯಕ್ಷರು ಚೆರ್ಚಿಸಿ ಅಂತಿಮ ತೀರ್ಮಾನ ತಿಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.‌ನಡ್ಡಾ ಅವರನ್ನು ಭೇಟಿ ಮಾಡಿದ‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಅಧ್ಯಕ್ಷರ ಜೊತೆ ಚೆರ್ಚೆ ನಡೆಸಿದ್ದೇವೆ. ಅವರು ಪ್ರಧಾನಿ ಅವರ ಜೊತೆ ಚೆರ್ಚಿಸಿ ಅಂತಿಮ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬುದನ್ನು ರಾಷ್ಟ್ರೀಯ ನಾಯಕರೇ ನಿರ್ಧರಿಸುತ್ತಾರೆ ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಧಿವೇಶನಕ್ಕೆ ಮುನ್ನ ವಿಸ್ತರಣೆ ಆಗಬೇಕು ಅನ್ನೋದು ನನ್ನ ಆಪೇಕ್ಷೆ. ವಿಸ್ತರಣೆಯೋ, ಪುನರ್ ರಚನೆಯೋ, ಎಷ್ಟು ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಅನ್ನೋದನ್ನು ಹೈಕಮಾಂಡ್ ತಿಳಿಸಿಲಿದೆ ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com