ನಿಮಗೆ ಬರ್ತ್ ಡೇ ಗಿಫ್ಟ್ ಏನು ಬೇಕು ಎಂದು ಕೇಳಿದವರಿಗೆ ಪ್ರಧಾನಿ ಮೋದಿ ಹೇಳಿದ್ದೇನು? 

ತಮ್ಮ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಎಲ್ಲರಿಗೂ ಧನ್ಯವಾದ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ವೈರಸ್ ನ್ನು ಆದಷ್ಟು ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಇದುವೇ ನನಗೆ ನೀವು ನನ್ನ ಹುಟ್ಟುಹಬ್ಬಕ್ಕೆ ನೀಡುವ ಉಡುಗೊರೆ ಎಂದು ಕೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ತಮ್ಮ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಎಲ್ಲರಿಗೂ ಧನ್ಯವಾದ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ವೈರಸ್ ನ್ನು ಆದಷ್ಟು ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಇದುವೇ ನನಗೆ ನೀವು ಹುಟ್ಟುಹಬ್ಬಕ್ಕೆ ನೀಡುವ ಉಡುಗೊರೆ ಎಂದು ಕೇಳಿದ್ದಾರೆ.

ನಿನ್ನೆ ತಡರಾತ್ರಿ ಟ್ವೀಟ್ ಮಾಡಿದ ಅವರು, ನನ್ನ ಹುಟ್ಟುಹಬ್ಬಕ್ಕೆ ಏನು ಬೇಕು ಎಂದು ಹಲವರು ಕೇಳಿದ್ದಾರೆ, ಅವರಲ್ಲಿ ನಾನು ಈ ಕ್ಷಣದಲ್ಲಿ ಕೇಳಿಕೊಳ್ಳುವುದಿಷ್ಟೆ, ಮಾಸ್ಕ್ ಕಡ್ಡಾಯವಾಗಿ ಧರಿಸುವುದನ್ನು ಮರೆಯಬೇಡಿ, ಅದನ್ನು ಸರಿಯಾಗಿ ಧರಿಸಿಕೊಳ್ಳಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಜನದಟ್ಟಣೆ ಇರುವಲ್ಲಿ ಸೇರಬೇಡಿ, ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನಮ್ಮ ಭೂಮಿಯನ್ನು ಆರೋಗ್ಯಯುತವಾಗಿ ಕಾಪಾಡಿಕೊಳ್ಳೋಣ ಎಂದು ಕೂಡ ಪ್ರಧಾನಿ ಮನವಿ ಮಾಡಿದ್ದಾರೆ. ಅವರು ನಿನ್ನೆ 70 ವಸಂತಗಳನ್ನು ಪೂರೈಸಿ 71ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com