ಕೋವಿಡ್-19 ನಿಂದಾಗಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲು

ಕೊರೋನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

ನವದೆಹಲಿ: ಕೊರೋನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖಂಡರು ಆಗಿರುವ 48 ವರ್ಷದ ಮನಿಶ್ ಸಿಸೋಡಿಯಾ ಅವರನ್ನು ಇಲ್ಲಿನ ಎಲ್ ಎನ್ ಜೆಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ.

ಸೆಪ್ಟೆಂಬರ್ 14 ರಂದು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಹೋಮ್ ಐಸೋಲೇಷನ್ ನಲ್ಲಿದ್ದರು. ಇದೀಗ ಅವರಿಗೆ ಜ್ವರ ಹಾಗೂ ಆಮ್ಲಜನಕ ಪ್ರಮಾಣದಲ್ಲಿ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com