ಗೋರಖ್‌ಪುರ: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಕೋವಿಡ್-19 ಪಾಸಿಟಿವ್ ಮಹಿಳೆ, ಒಂದು ಮಗು ವೆಂಟಿಲೇಟರ್ ನಲ್ಲಿ

ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಬಿಆರ್ ಡಿ ವೈದ್ಯಕೀಯ ಕಾಲೇಜಿನಲ್ಲಿ ಕೊರೋನಾವೈರಸ್ ಪಾಸಿಟಿವ್ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗೋರಖ್ ಪುರ: ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಬಿಆರ್ ಡಿ ವೈದ್ಯಕೀಯ ಕಾಲೇಜಿನಲ್ಲಿ ಕೊರೋನಾವೈರಸ್ ಪಾಸಿಟಿವ್ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನಾಲ್ಕು ಶಿಶುಗಳ ಪೈಕಿ ಮೂರು ಶಿಶುಗಳು ಆರೋಗ್ಯವಾಗಿದ್ದು, ಒಂದು ವೆಂಟಿಲೇಟರ್ ನಲ್ಲಿದೆ.ತಾಯಿ ಕೂಡಾ ಆರೋಗ್ಯದಿಂದ ಇರುವುದಾಗಿ ಬಿಆರ್ ಡಿ ವೈದ್ಯಕೀಯ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಕುಮಾರ್ ಹೇಳಿದ್ದಾರೆ.

ಡಿಯೋರಿಯಾ ಜಿಲ್ಲೆಯ ಗೌರಿ ಬಜಾರ್ ನ  26 ವರ್ಷದ ಮಹಿಳೆ ಮಂಗಳವಾರ ರಾತ್ರಿ ವೈದ್ಯಕೀಯ ಕಾಲೇಜಿನ ಟ್ರೋಮಾ ಸೆಂಟರ್ ಗೆ ತಲುಪಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಕಂಡುಬಂದಿದೆ. ದಕ್ಷ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ತಂಡ ಸುರಕ್ಷಿತವಾಗಿ ಹೆರಿಗೆ ಮಾಡಿಸಿರುವುದಾಗಿ ಅವರು ತಿಳಿಸಿದ್ದಾರೆ.

ನಾಲ್ಕು ಶಿಶುಗಳ ತೂಕ 980 ಗ್ರಾಂನಿಂದ 1.5 ಕೆಜಿ ನಡುವೆ ಇದೆ. ಇದೊಂದು ಅಪರೂಪದ ಪ್ರಕರಣವಾಗಿದ್ದು, ಹೆರಿಗೆ ಮಾಡಿಸುವುದು ಸವಾಲಿನ ಕೆಲಸವಾಗಿತ್ತು. ಆದಾಗ್ಯೂ, ತಾಯಿ ಮಗು ಆರೋಗ್ಯದಿಂದ ಇದ್ದಾರೆ. ನಾಲ್ಕು ಶಿಶುಗಳ ಮಾದರಿಯನ್ನು ಕೊರೋನಾವೈರಸ್ ಪರೀಕ್ಷೆಗಾಗಿ ಸೂಕ್ಷ್ಮ ಜೀವವಿಜ್ಞಾನ ವಿಭಾಗಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com