ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ: ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಇಂದು ರಾಷ್ಟ್ರಧ್ವಜ ಅರ್ಧ ಮಟ್ಟದಲ್ಲಿ ಹಾರಾಟ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕರ್ನಾಟಕದ ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಟ ನಡೆಸಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕರ್ನಾಟಕದ ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಟ ನಡೆಸಲಿದೆ.

ಕೋವಿಡ್-19 ಪಾಸಿಟಿವ್ ಬಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಸುರೇಶ್ ಅಂಗಡಿಯವರ ಆರೋಗ್ಯದಲ್ಲಿ ನಿನ್ನೆ ವಿಪರೀತ ಏರಿಳಿತ ಕಂಡು ಅಸುನೀಗಿದ್ದಾರೆ.

ಸಚಿವ ಸುರೇಶ್ ಅಂಗಡಿಯವರ ನಿಧನ ಹಿನ್ನೆಲೆಯಲ್ಲಿ ಇಂದು ದೆಹಲಿಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಅರ್ಧಕ್ಕೆ ಹಾರಾಟ ನಡೆಸಲಿದೆ ಎಂದು ಗೃಹ ಇಲಾಖೆ ವಕ್ತಾರರು ತಿಳಿಸಿದ್ದಾರೆ.

2004ರಿಂದ ಬೆಳಗಾವಿಯಿಂದ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com