ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 86,052 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 58 ಲಕ್ಷ, 92,290 ಮಂದಿ ಸಾವು

ದೇಶದಲ್ಲಿ ಕೊರೋನಾ ಅಬ್ಬರ ಕೊಂಚ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 86,052 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 58 ಲಕ್ಷ ಗಡಿ ದಾಟಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ಕೊಂಚ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 86,052 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 58 ಲಕ್ಷ ಗಡಿ ದಾಟಿದೆ. 

ಒಂದೇ ದಿನ 86,052 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 58,18,571 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 1,141 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 92,290ಕ್ಕೆ ಏರಿಕೆಯಾಗಿದೆ. 

58,18,571 ಮಂದಿ ಸೋಂಕಿತರ ಪೈಕಿ ಈ ವರೆಗೂ ದೇಶದಲ್ಲಿ 47,56,165 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 9,70,116 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com