ಜೆಡಿಯು ಸೇರಿದ ನಿವೃತ್ತ ಡಿಜಿಪಿ ಗುಪ್ತೇಶ್ವರ ಪಾಂಡೆ

ಮುಂದಿನ ತಿಂಗಳು ಬಿಹಾರ ಚುನಾವಣೆ ನಡೆಯಲಿದ್ದು ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದಿದ್ದ ಬಿಹಾರ ಡಿಜಿಪಿ ಗುಪ್ತೇಶ್ವರ ಪಾಂಡೆ ಅವರು ಜೆಡಿಯು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 
ನಿತಿಶ್ ಕುಮಾರ್-ಗುಪ್ತೇಶ್ವರ ಪಾಂಡೆ
ನಿತಿಶ್ ಕುಮಾರ್-ಗುಪ್ತೇಶ್ವರ ಪಾಂಡೆ

ಪಟ್ನಾ: ಮುಂದಿನ ತಿಂಗಳು ಬಿಹಾರ ಚುನಾವಣೆ ನಡೆಯಲಿದ್ದು ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದಿದ್ದ ಬಿಹಾರ ಡಿಜಿಪಿ ಗುಪ್ತೇಶ್ವರ ಪಾಂಡೆ ಅವರು ಜೆಡಿಯು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 

ನಿವೃತ್ತಿಗೆ ಕೆಲ ದಿನಗಳ ಇರುವಂತೆ ಗುಪ್ತೇಶ್ವರ ಪಾಂಡೆ ಅವರು ವಿಆರ್ ಎಸ್ ಪಡೆದುಕೊಂಡಿದ್ದರು. ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೆ ರಾಜಕೀಯ ಎಂಟ್ರಿ ಕುರಿತು ಯಾವುದೇ ಸೂಚನೆ ನೀಡಿರಲಿಲ್ಲ. 

ಆದರೆ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಹಾರ ಜೆಡಿಯು ಅಧ್ಯಕ್ಷರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 

ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವ ವಿಷಯದ ಬಗ್ಗೆ 1987ರ ಬ್ಯಾಚ್ ಐಪಿಎಸ್ ಅಧಿಕಾರಿ ಕುಮಾರ್ ಅವರನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು.

ಅಕ್ಟೋಬರ್ 28ರಿಂದ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ನವೆಂಬರ್ 10ಕ್ಕೆ ಫಲಿತಾಂಶ ಹೊರ ಬೀಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com