ಭಾರತದಲ್ಲಿ ಚಟುವಟಿಕೆ ಸ್ಥಗಿತಗೊಳಿಸಿದ ಆಮ್ನೆಸ್ಟಿ: ಕೇಂದ್ರ ಸರ್ಕಾರದ ವಿರುದ್ಧ ಆರೋಪ

ಮಾನವ ಹಕ್ಕುಗಳ ಹೆಸರಿನಲ್ಲಿ ಭಾರತದಲ್ಲಿ ಕೆಲಸ ಮಾಡುತ್ತಿದ್ದ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಭಾರತದ ತನ್ನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ.
ಆಮ್ನೆಸ್ಟಿ
ಆಮ್ನೆಸ್ಟಿ

ನವದೆಹಲಿ: ಮಾನವ ಹಕ್ಕುಗಳ ಹೆಸರಿನಲ್ಲಿ ಭಾರತದಲ್ಲಿ ಕೆಲಸ ಮಾಡುತ್ತಿದ್ದ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಭಾರತದ ತನ್ನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ.

ಭಾರತ ಸರ್ಕಾರ ಆಮ್ನೆಸ್ಟಿಗೆ ಸಂಬಂಧಿಸಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವ ಹಿನ್ನೆಲೆಯಲ್ಲಿ ತಾನು ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಸಂಶೋಧನೆಯಲ್ಲಿ ತೊಡಗಿದ್ದ ಸಿಬ್ಬಂದಿಗಳನ್ನು ಮನೆಗೆ ಕಳಿಸಲೇಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಆಮ್ನೆಸ್ಟಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿರುವ ವಿಷಯ ಸೆ.10 ರಂದು ತಿಳಿದುಬಂದಿದೆ. ನಾವು ಭಾರತ ಸರ್ಕಾರ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿಯೇ ಕೆಲಸ ಮಾಡುತ್ತಿದ್ದರೂ ನಮ್ಮ ವಿರುದ್ಧ ಭಾರತ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆಮ್ನೆಸ್ಟಿ ಅಸಮಾಧಾನ ಹೊರಹಾಕಿದೆ. 

ಭಾರತ ಸರ್ಕಾರ ಆಧಾರರಹಿತ ಮತ್ತು ಪ್ರೇರಿತ ಆರೋಪಗಳ ಮೇಲೆ ಮಾನವಹಕ್ಕುಗಳ ಸಂಸ್ಥೆಯೊಂದನ್ನು ಪರಿಶೋಧನೆಗೊಳಪಡಿಸಿದೆ ಎಂದು ಆಮ್ನೆಸ್ಟಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಲಾಭದ ಅಪೇಕ್ಷೆ ಇಲ್ಲದೆ ಕೆಲಸ ಮಾಡುತ್ತಿರುವ ಸಂಸ್ಥೆ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ವಿದೇಶಗಳಿಂದ ದೇಣಿಗೆ ಪಡೆಯುತ್ತಿದೆ ಎಂಬ ಆರೋಪದ ಮೇಲೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಆಮ್ನೆಸ್ಟಿಯ ಬೆಂಗಳೂರು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಇದೇ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಹ ಆಮ್ನೆಸ್ಟಿ ವಿರುದ್ಧ ವಿಚಾರಣೆ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com