ನಿಜಾಮುದ್ದೀನ್ ಮಸೀದಿಯಿಂದ ಕೊರೋನಾ ಸ್ಫೋಟ: 7 ಮಂದಿ ವಿರುದ್ಧ ಎಫ್ಐಆರ್ ದಾಖಲು

ಇಡೀ ದೇಶಕ್ಕೆ ಕೊರೋನಾ ಸೋಂಕು ಕುರಿತು ಭಾರೀ ಆತಂಕವನ್ನು ಸೃಷ್ಟಿಸಿರುವ ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಕಾರ್ಯಕ್ರಮ ಪ್ರಕರಣ ಕುರಿತಂತೆ ದೆಹಲಿ ಪೊಲೀಸರು 7 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಇಡೀ ದೇಶಕ್ಕೆ ಕೊರೋನಾ ಸೋಂಕು ಕುರಿತು ಭಾರೀ ಆತಂಕವನ್ನು ಸೃಷ್ಟಿಸಿರುವ ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಕಾರ್ಯಕ್ರಮ ಪ್ರಕರಣ ಕುರಿತಂತೆ ದೆಹಲಿ ಪೊಲೀಸರು 7 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಮೌಲಾನಾ ಸಾದ್. ಡಾ.ಜೀಶಾನ್, ಮುಫ್ತಿ ಶೆಹ್ಜಾದ್, ಎಂ.ಸೈಫಿ, ಯೂನಸ್, ಮೊಹಮ್ಮದ್ ಸಲ್ಮಾನ್ ಮತ್ತು ಮೊಹಮ್ಮದ್ ಅಶ್ರಫ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲು ಹಾಗೂ ಇಂತಹ ಪರಿಸ್ಥಿತಿ ಎದುರಾಗಲು ಈ ಏಳು ಮಂದಿ ಕಾರಣ ಎಂದು ಎಫ್ಐಆರ್ ನಲ್ಲಿ ತಿಳಿಸಲಾಗಿದೆ. ಮಾರ್ಚ್ 24 ರಂದೇ ನೋಟಿಸ್ ನೀಡಿದ್ದರು ಜನರು ಗುಂಪು ಸೇರಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ. 

ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ (ಬಂಗ್ಲೇವಾಲೆ) ಮಸೀದಿಯಲ್ಲಿ ತಬ್ಲೀಘಿ ಜಮಾತ್ ಸಂಘಟನೆ ಮಾರ್ಚ್ 1ರಿಂದ 15ರವರೆಗೆ ಧಾರ್ಮಿಕ ಸಭೆಯೊಂದನ್ನು ಹಮ್ಮಿಕೊಂಡಿದ್ದು, ಇದರಲ್ಲಿ ದೇಶ ವಿದೇಶಗಲ 8000ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಇವರ ಪೈಕಿ ಕೆಲವರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಗೆ ಆಗಮಿಸಿದ್ದವರನ್ನೆಲ್ಲಾ ಇದೀಗ ಪರೀಕ್ಷೆಗೆ ಗುರಿಪಡಿಸಲಾಗುತ್ತಿದೆ. ಅವರ ಪೈಕಿ ನೂರಾರು ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದಕ್ಕಿಂತ ಆತಂಕಕಾರಿ ವಿಚಾರವೆಂದರೆ ಇದೀಗ ಸೋಂಕು ಪತ್ತೆಯಾದವರು, ಕರ್ನಾಟಕ, ತಮಿಳುನಾಡು, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಿಗೆ ತೆರಳಿದ್ದು, ಅಲ್ಲಿಯೂ ಇನ್ನಷ್ಟು ಜನರಿಗೆ ಸೋಂಕು ಹಬ್ಬಿಸಿರುವ ಭೀತಿ ಎದುರಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com