ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ವೈದ್ಯರಿಗೆ ಕೊರೋನಾ ಸೋಂಕು!

ರಾಷ್ಟ್ರ ರಾಜಧಾನಿ ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು, ಸೋಂಕಿತ ವೈದ್ಯರು ದೆಹಲಿ ರಾಜ್ಯ ಕ್ಯಾನ್ಸರ್ ಸಂಸ್ಥೆಯಲ್ಲಿ ವೈದ್ಯರಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಇದೀಗ ವೈದ್ಯರಲ್ಲಿಯೇ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಕಾರ್ಯನಿರ್ವಹಣೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಇದೀಗ ಆಸ್ಪತ್ರೆ ಸಂಪೂರ್ಣ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಸೋಂಕಿತ ವೈದ್ಯರ ಸಹೋದರ ಕೆಲ ದಿನಗಳ ಹಿಂದಷ್ಟೇ ಯುಕೆಯಿಂದ ಭಾರತಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ಸಹೋದರನನ್ನು ಭೇಟಿ ಮಾಡಲು ತೆರಳಿದ್ದರು. ಇದೀಗ ವೈದ್ಯರಲ್ಲಿ ಸೋಂಕು ಪತ್ತೆಯಾಗಿದ್ದು, ವೈದ್ಯರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಐಸೊಲೇಷನ್ ನಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ವರೆಗೂ 120 ಮಂದಿಯನ್ನ ಪರೀಕ್ಷೆಗೊಳಪಡಿಸಲಾಗಿದ್ದು, ಯಾರಲ್ಲೂ ವೈರಸ್ ದೃಢಪಟ್ಟಿಲ್ಲ. ಪರೀಕ್ಷೆಗೊಳಪಟ್ಟ ಬಹುತೇಕ ಮಂದಿ ಹೊರಗಿನಿಂದ ಬಂದವರೇ ಆಗಿದ್ದಾರೆ. ದೆಹಲಿ ಆಸ್ಪತ್ರೆಯಲ್ಲಿ 750 ಮಂದಿ ದಾಖಲಾಗಿದ್ದು, ಒಬ್ಬರು ಮಾತ್ರ ವೆಂಟಿಲೇಟರ್ ಸಪೋರ್ಟ್ ನಲ್ಲಿದ್ದಾರೆ. ಇಬ್ಬರು ಆಕ್ಸಿಜನ್ ಸಹಾಯದಲ್ಲಿದ್ದಾರೆ. ಉಳಿದವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com