5 ರೈಲಿನಲ್ಲಿ ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರೊಂದಿಗೆ ಪ್ರಯಾಣಿಸಿದ ಸಾವಿರಾರು ಮಂದಿ ಮೇಲೆ ತೀವ್ರ ನಿಗಾ

ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲಿಘಿ ಜಮಾತ್ ನ ಪ್ರಾರ್ಥನೆಯಲ್ಲಿ ಭಾಗವಹಿಸಿದವರೊಂದಿಗೆ ಐದು ರೈಲುಗಳಲ್ಲಿ ಪ್ರಯಾಣಿಸಿದ ಸಾವಿರಾರು ಮಂದಿಯ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ರೈಲ್ವೆ ಇಲಾಖೆ ಐದು...
ನಿಜಾಮುದ್ದೀನ್ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು
ನಿಜಾಮುದ್ದೀನ್ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು

ನವದೆಹಲಿ: ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲಿಘಿ ಜಮಾತ್ ನ ಪ್ರಾರ್ಥನೆಯಲ್ಲಿ ಭಾಗವಹಿಸಿದವರೊಂದಿಗೆ ಐದು ರೈಲುಗಳಲ್ಲಿ ಪ್ರಯಾಣಿಸಿದ ಸಾವಿರಾರು ಮಂದಿಯ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ರೈಲ್ವೆ ಇಲಾಖೆ ಐದು ರೈಲಿನಲ್ಲಿ ಪ್ರಯಾಣಿಸಿದ ಎಲ್ಲಾ ಪ್ರಯಾಣಿಕರ ವಿವರ ಸಂಗ್ರಹಿಸುತ್ತಿದೆ.

ಈ ಎಲ್ಲಾ ಐದು ರೈಲುಗಳು ಮಾರ್ಚ್ 13 ರಿಂದ ಮಾರ್ಚ್ 19ರ ವರೆಗೆ ದೆಹಲಿಯಿಂದ ವಿವಿಧ ರಾಜ್ಯಗಳಿಗೆ ಸಂಚರಿಸಿವೆ. ಆಂಧ್ರ ಪ್ರದೇಶದ ಗುಂಟೂರಿಗೆ ಸಂಚರಿಸಿದ ತುರಾಂತೊ ಎಕ್ಸ್‌ಪ್ರೆಸ್, ಚೆನ್ನೈಗೆ ತೆರಳಿದ ಗ್ರ್ಯಾಂಡ್ ಟ್ರಂಕ್ ಎಕ್ಸ್‌ಪ್ರೆಸ್, ಚೆನ್ನೈ- ತಮಿಳುನಾಡು ಎಕ್ಸ್‌ಪ್ರೆಸ್, ನವದೆಹಲಿ-ರಾಂಚಿ ರಾಜಧಾನಿ ಎಕ್ಸ್‌ಪ್ರೆಸ್ ಮತ್ತು ಎಪಿ ಸಂಪರ್ಕ್ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.

ಈ ಐದು ರೈಲುಗಳಲ್ಲಿ ಒಟ್ಟು ಎಷ್ಟು ಮಂದಿ ಪ್ರಯಾಣಿಸಿದ್ದಾರೆ ಎಂಬುದು ಇನ್ನು ನಿರ್ಧಿಷ್ಟವಾಗಿ ತಿಳಿದು ಬಂದಿಲ್ಲ. ಆದರೆ ಪ್ರತಿ ರೈಲಿನಲ್ಲಿ ಪ್ರಯಾಣಿಸಿದ ಸುಮಾರು 1000 ದಿಂದ 1200 ಮಂದಿ ಮತ್ತು ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದಾರೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ರೈಲ್ವೆ ಇಲಾಖೆ ಈ ಐದು ರೈಲುಗಳಲ್ಲಿ ಪ್ರಯಾಣಸಿದ ಪ್ರಯಾಣಿಕರ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಿದೆ. ಅವರು ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರೊಂದಿಗೆ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದ ಹಲವು ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಸುಮಾರು 1800 ಮಂದಿಯನ್ನು ದೇಶದ ವಿವಿದೆಡೆಯ 9 ಆಸ್ಪತ್ರೆಗಳು ಹಾಗೂ ಕ್ವಾರಂಟೈನ್ ಕೇಂದ್ರಗಳಿಗೆ ರವಾನಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com