1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳ ತೇರ್ಗಡೆ ಮಾಡಲು ಸಿಬಿಎಸ್ಇ ಗೆ ಸೂಚನೆ 

1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವಂತೆ ಸಿಬಿಎಸ್ಇ ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚನೆ ನೀಡಿದೆ. 

Published: 01st April 2020 07:46 PM  |   Last Updated: 01st April 2020 07:46 PM   |  A+A-


HRD ministry directs CBSE to promote all class 1-8 students to next class   

1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳ ತೇರ್ಗಡೆ ಮಾಡಲು ಸಿಬಿಎಸ್ಇ ಗೆ ಸೂಚನೆ

Posted By : Srinivas Rao BV
Source : PTI

ನವದೆಹಲಿ: 1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವಂತೆ ಸಿಬಿಎಸ್ಇ ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚನೆ ನೀಡಿದೆ. 

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ತರಗತಿಗಳಿಗೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. 
 

9-11 ತರಗತಿ ಶಾಲೆಗಳ ವಿದ್ಯಾರ್ಥಿಗಳನ್ನು ಈ ವರೆಗೂ ನಡೆಸಲಾದ ಶಾಲಾ ಆಧಾರಿತ ಮೌಲ್ಯಮಾಪನಗಳ ಆಧಾರದಲ್ಲಿ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುವುದು ತೇರ್ಗಡೆಯಾಗದೇ ಇರುವವರು ಆನ್ ಲೈನ್ ಅಥವಾ ಆಫ್ ಲೈನ್ ನಲ್ಲಿ ಶಾಲಾ ಆಧಾರಿತ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp