ಕಾರ್ಮಿಕರ ವಲಸೆ ಕುರಿತ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಕೇಂದ್ರದ ಸೂಚನೆ

ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ವಿರುದ್ಧ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ. ಈ ಸಂಬಂಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ

Published: 02nd April 2020 03:34 PM  |   Last Updated: 02nd April 2020 03:36 PM   |  A+A-


Home_ministry1

ಗೃಹ ಸಚಿವಾಲಯ

Posted By : Nagaraja AB
Source : UNI

ನವದೆಹಲಿ: ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ವಿರುದ್ಧ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ. ಈ ಸಂಬಂಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ

ವಾಸ್ತವ ಸಂಗತಿಗಳನ್ನು ಪರಿಶೀಲಿಸದ ಮತ್ತು ಅಸತ್ಯದಿಂದ ಕೂಡಿದ ಸುದ್ದಿಗಳ ಸಚಾತನ ಖಚಿತಪಡಿಸಿಕೊಳ್ಳಲು ವೆಬ್ ಪೋರ್ಟಲ್ ರಚಿಸುತ್ತಿರುವುದಾಗಿ ಸಚಿವಾಲಯ ತಿಳಿಸಿದೆ. ರಾಜ್ಯಗಳಲ್ಲೂ ಇದೇ ರೀತಿಯ ಪೋರ್ಟಲ್ ವ್ಯವಸ್ಥೆ ಕಲ್ಪಿಸಿ ಸುದ್ದಿಗಳ ವಿಶ್ವಾಸಾರ್ಹತೆ ಖಚಿತಪಡಿಸಿಕೊಳ್ಳುವಂತೆ ಸಲಹೆ ಮಾಡಿದೆ.

ವಲಸೆ ಕಾರ್ಮಿಕರು ಸಾಮೂಹಿಕವಾಗಿ ತಮ್ಮ ಊರುಗಳಿಗೆ ತೆರಳುತ್ತಿರುವ ವಿಚಾರದಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿರುವುದನ್ನು ಸರ್ವೋನ್ನತ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದರಿಂದ ಇಂತಹ ಜನ ಸಮೂಹ ಹೇಳಿಕೊಳ್ಳಲಾಗದ ಯಾತನೆ ಅನುಭವಿಸಿದೆ ಎಂದು ಹೇಳಿದೆ. ಈ ಕಾರ್ಮಿಕರಿಗೆ ಆಹಾರ, ವೈದ್ಯಕೀಯ ಸೌಲಭ್ಯ, ಆಶ್ರಯ ಒದಗಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp