ದೇಶದಲ್ಲಿ ಕೊರೋನಾ ಸ್ಫೋಟ: ರಾಜಸ್ತಾನದಲ್ಲಿ 9 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 2,072ಕ್ಕೆ ಏರಿಕೆ

ದೇಶದ ವಿವಿಧೆಡೆ ಕೊರೋನಾ ವೈರಸ್ ಸ್ಫೋಟಗೊಂಡಿದ್ದು, ಗುರುವಾರ ರಾಜಸ್ತಾನದಲ್ಲಿ ಮತ್ತೆ 9 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ 2072ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದ ವಿವಿಧೆಡೆ ಕೊರೋನಾ ವೈರಸ್ ಸ್ಫೋಟಗೊಂಡಿದ್ದು, ಗುರುವಾರ ರಾಜಸ್ತಾನದಲ್ಲಿ ಮತ್ತೆ 9 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ 2072ಕ್ಕೆ ಏರಿಕೆಯಾಗಿದೆ. 

ರಾಜಸ್ತಾನದ ರಾಮ್ಗಂಜ್ ನಲ್ಲಿ 7 ಮಂದಿ, ಜೋಧ್ಪುರ ಹಾಗೂ ಝುಂಜುನುವಿನಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ಇದರಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ನಿನ್ನೆಯಷ್ಟೇ ಕೊರೋನಾಗೆ ದೇಶದಲ್ಲಿ 16 ಜನರು ಮೃತಪಟ್ಟಿದ್ದರು. ಇದರೊಂದಿಗೆ ದೇಶದಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 59ಕ್ಕೆ ಏರಿಕೆಯಾಗಿತ್ತು. ಅಲ್ಲದೆ, 400ಕ್ಕೂ ಹೆಚ್ಚು ಹೊಸ ಸೋಂಕಿತರ ಪ್ರಕರಣಗಳು ಬೆಳಕಿಗೆ ಬಂದಿತ್ತು. 

ಮಹಾರಾಷ್ಟ್ರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಾವಿನ ಪ್ರಕರಣಗಳು ವರದಿಯಾಗಿತ್ತು. ಮತ್ತೊಂದೆಡೆ ದೇಶದಾದ್ಯಂತ 400 ಜನರು ವ್ಯಾಧಿಗೆ ತುತ್ತಾಗಿದ್ದರು. ಹೀಗಾಗಿ ಕೊರೋನಾ ಪೀಡಿತರ ಸಂಖ್ಯೆ 2000 ದಾಟಿದೆ. 

ನಿನ್ನೆ ದಾಖಲಾದ ಪ್ರಕರಣಗಳ ಪೈಕಿ ತಬ್ಲೀಘಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರೇ 150 ಮಂದಿಯಿದ್ದಾರೆ. ಕೇರಳವೊಂದರಲ್ಲೇ ಬುಧವಾರ 100ಕ್ಕೂ ಹೆಚ್ಚು ಹೊಸ ಪ್ರಕರಣ ಪತ್ತೆಯಾಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com