ನಾಳೆ ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ವಿಡಿಯೋ ಸಂದೇಶ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಸಂದೇಶವನ್ನು ದೇಶದ ಜನತೆಯೊಂದಿಗೆ ಹಂಚಿಕೊಳ್ಳಲಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಸಂದೇಶವನ್ನು ದೇಶದ ಜನತೆಯೊಂದಿಗೆ ಹಂಚಿಕೊಳ್ಳಲಿದ್ದಾರೆ.

‘ನಾಳೆ ಬೆಳಿಗ್ಗೆ 9 ಗಂಟೆಗೆ ದೇಶದ ಜನತೆಯೊಂದಿಗೆ ಸಣ್ಣ ವೀಡಿಯೊ ಸಂದೇಶವನ್ನು ಹಂಚಿಕೊಳ್ಳುತ್ತೇನೆ.’ ಎಂದು ಪ್ರಧಾನಿ ಇಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಕೊರೋನಾ ವೈರಸ್ ಉಲ್ಬಣಗೊಂಡ ನಂತರ ಮೂರನೇ ಬಾರಿಗೆ ಪ್ರಧಾನಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಮಧ್ಯೆ, ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 2000 ದಾಟಿದ್ದು, ಮಾರಕ ಸೋಂಕಿನಿಂದ ಸುಮಾರು 50 ಹೆಚ್ಚು ಸಾವುಗಳು ಸಂಭವಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com