ದೇಶದಾದ್ಯಂತ ರಾಮನವಮಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಮೋದಿ

ರಾಮನವಮಿಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭ ಹಾರೈಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಮನವಮಿಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭ ಹಾರೈಸಿದ್ದಾರೆ.

ರಾಮನವಮಿ ಹಬ್ಬವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾವಣನ ಪ್ರತಿಕೃತಿ ದಹಿಸಿ ದುಷ್ಟಸಂಹಾರದ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಹಲವೆಡೆ ಜನರು ಒಟ್ಟಾಗಿ ಕೋಸಂಬರಿ, ಪಾನಕ ಹಂಚುತ್ತಿದ್ದರು. ಆದರೆ ಈ ಬಾರಿ ಉತ್ಸವದ ಸಂಭ್ರಮ, ಸಡಗರಕ್ಕೆ ಕೊರೊನಾ ಕಾರ್ಮೋಡ ಅಡ್ಡಿಯಾಗಿದೆ.

ಕೊರೋನಾ ಭೀತಿ ನಡುವಲ್ಲೂ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಶುಭಾಶಯಗಳನ್ನು ಕೋರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com