ಕೊರೋನಾ ಸೋಂಕಿತರಿಗೆ ಚಿಕಿತ್ಸೆ ವೇಳೆ ವೈದ್ಯಕೀಯ ಸಿಬ್ಬಂದಿ ಸಾವಿಗೀಡಾದರೆ 1 ಕೋಟಿ ಪರಿಹಾರ: ಕೇಜ್ರಿವಾಲ್

ಮಹಾಮಾರಿ ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ಸೋಂಕು ತಗುಲಿ ಸಾವಿಗೀಡಾದರೆ ಅವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ಸೋಂಕು ತಗುಲಿ ಸಾವಿಗೀಡಾದರೆ ಅವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 

ವೈದ್ಯರು ಸಹ ಯೋಧರಂತೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರ ಪಾತ್ರ ಮುಖ್ಯವಾದದ್ದು. ಹೀಗಾಗಿ ಸೋಂಕು ತಗುಲಿ ವೈದ್ಯಕೀಯ ಸಿಬ್ಬಂದಿ ಮೃತಪಟ್ಟರೆ 1 ಕೋಟಿ ರುಪಾಯಿ ನೀಡುವುದಾಗಿ ಹೇಳಿದ್ದಾರೆ. 

ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಇಂದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com