ದೆಹಲಿ ಕ್ಯಾನ್ಸರ್ ಆಸ್ಪತ್ರೆಯ ಇಬ್ಬರು ನರ್ಸ್ ಗಳಲ್ಲಿ ದೃಢಪಟ್ಟ ಸೋಂಕು:ಹೆಚ್ಚಿದ ಆತಂಕ

ರಾಷ್ಟ್ರ ರಾಜಧಾನಿ ದೆಹಲಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ನರ್ಸ್ ಗಳಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ನರ್ಸ್ ಗಳಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ಈ ಹಿಂದೆ ಕೂಡ ಇದೇ ಆಸ್ಪತ್ರೆಯ ವೈದ್ಯರೊಬ್ಬರಲ್ಲಿ ವೈರಸ್ ದೃಢಪಟ್ಟಿತ್ತು. ಬಳಿಕ ಆಸ್ಪತ್ರೆ ಕಾರ್ಯವೈಖರಿಯನ್ನು ಏಪ್ರಿಲ್ 1 ರಂದು ಒಂದು ದಿನ ಮಟ್ಟಿಗೆ ಸ್ಥಗಿತಗೊಳಿಸಿ, ಆಸ್ಪತ್ರೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಕಾರ್ಯ ನಡೆಸಲಾಗಿತ್ತು. ಇದೀಗ ಮತ್ತೆ ಆಸ್ಪತ್ರೆಯ ಇಬ್ಬರು ದಾದಿಯರಲ್ಲಿಯೂ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ  ಆತಂಕ ಹೆಚ್ಚಾಗಿದೆ. 

ಇದೀಗ ಆಸ್ಪತ್ರೆಯ ಇಬ್ಬರು ನರ್ಸ್ ಗಳಲ್ಲಿ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 295ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರಸ್ತುತ ವೈರಸ್ ಪತ್ತೆಯಾಗಿರುವ ಇಬ್ಬರು ಆಸ್ಪತ್ರೆ ಸಿಬ್ಬಂದಿಗಳೂ ಕೂಡ ಈ ಹಿಂದೆ ವೈರಸ್ ದೃಢಪಟ್ಟಿದ್ದ ವೈದ್ಯರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com