ಲಾಕ್ ಡೌನ್: ರೈತರು ಬೆಳೆದ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ

ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಗೊಳಿಸಿರುವ ಲಾಕ್ ಡೌನ್ ನಿಂದ ರೈತರು ಬೆಳೆದ ಕೃಷಿ ಪರಿಕರಗಳನ್ನು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಗೊಳಿಸಿರುವ ಲಾಕ್ ಡೌನ್ ನಿಂದ ರೈತರು ಬೆಳೆದ ಕೃಷಿ ಪರಿಕರಗಳನ್ನು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ

ರೈತರ ಉತ್ಪನ್ನಗಳು ಭೂಮಿಯಲ್ಲೇ ಕೊಳೆಯುತ್ತಿದ್ದು, ಮಾರುಕಟ್ಟೆಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ ಎಂಬ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಮುಕ್ತ ಮಾರಾಟಕ್ಕೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ

ಇದಲ್ಲದೇ ಕೆಲವು ಸೇವೆಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯನಿರ್ವಹಣೆ, ಆಯುಷ್ ಗೆ ಸಂಬಂಧಿಸಿದ ಆರೋಗ್ಯ ಸೇವೆಗಳಿಗೆ ಅನುಮತಿ ಕೊಡಲಾಗಿದೆ

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾಳ್ ಈ ಸಂಬಂಧ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಮಕ್ಕಳು ಮತ್ತು ಮಹಿಳೆಯರು, ಹಾಲುಣಿಸುವ ಮಹಿಳೆಯರಿಗೆ  ಅಹಾರ ಮತ್ತು ಪೌಷ್ಠಿಕ ಆಹಾರ ಒದಗಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಅವಕಾಶ ಕಲ್ಪಿಸಲಾಗಿದೆ.ಇಂತಹ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಹೇಳಿದೆ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ೨೭ ಸಾವಿರದ ೫೦೦ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಅದನ್ನು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಪಿಎಂ-ಜಿಕೆವೈ ಪ್ಯಾಕೇಜ್ ಅಡಿಯಲ್ಲಿ ಅತಿ ಹೆಚ್ಚಿನ ಫಲಾನುಭವಿಗಳಿದ್ದು, ಅವರ ಖಾತೆಗಳಿಗೆ ಹಣ ಜಮೆ ಮಾಡಲು ಸಂಬಂಧಿಸಿದ ಇಲಾಖೆಗಳು, ಸಚಿವಾಲಯಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಜಯ್ ಬಲ್ಲಾಳ್ ಸೂಚಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com