ಕೊರೋನಾ ವೈರಸ್: ಕೇವಲ 24 ಗಂಟೆಗಳಲ್ಲಿ ಹೊಸ 478 ಕೋವಿಡ್ 19 ಪ್ರಕರಣ ದಾಖಲು, 2,547ಕ್ಕೇರಿದ ಸೋಂಕಿತರ ಸಂಖ್ಯೆ, 63 ಸಾವು

ದೇಶದಲ್ಲಿ ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 478 ಪ್ರಕರಣಗಳು ದಾಖಲಾಗಿದ್ದು. ಆ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,547ಕ್ಕೆ ಏರಿಕೆಯಾಗಿದೆ. ಅಂತೆಯೇ  ಸಾವಿನ ಸಂಖ್ಯೆ ಕೂಡ 63ಕ್ಕೆ ಏರಿಕೆಯಾಗಿದೆ.

Published: 03rd April 2020 10:02 PM  |   Last Updated: 03rd April 2020 11:39 PM   |  A+A-


Covid-19-India-Corona virus

ಕೊರೋನಾ ಭೀತಿ

Posted By : Srinivasamurthy VN
Source : The New Indian Express

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 478 ಪ್ರಕರಣಗಳು ದಾಖಲಾಗಿದ್ದು. ಆ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,547ಕ್ಕೆ ಏರಿಕೆಯಾಗಿದೆ. ಅಂತೆಯೇ  ಸಾವಿನ ಸಂಖ್ಯೆ ಕೂಡ 63ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ಒಂದರಲ್ಲೇ ಇಂದು 6 ಮಂದಿ ಕೊರೋನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 490ಕ್ಕೆ ಏರಿಕೆಯಾಗಿದೆ. ಈ ಪೈಕಿ ಮುಂಬೈನಲ್ಲಿ ಗರಿಷ್ಠ 278 ಮಂದಿ  ಸೋಂಕಿತರಿದ್ದು, ಪುಣೆಯಲ್ಲಿ 70 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ರಾಜಧಾನಿ ದೆಹಲಿಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಒಂದೇ ದಿನ ದೆಹಲಿಯಲ್ಲಿ 478 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ ಇಂದು 40 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಲ್ಲಿ  ಸೋಂಕಿತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ. ತೆಲಂಗಾಣದಲ್ಲಿ ಇಂದು ಮತ್ತೆ 75 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆ ಮೂಲಕ ಇಲ್ಲಿ ಸೋಂಕಿತರ ಸಂಖ್ಯೆ 229ಕ್ಕೆ ಏರಿಕೆಯಾಗಿದೆ. ಅಸ್ಸಾಂನಲ್ಲೂ ಇಂದು ಮತ್ತೆ 4 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಲ್ಲಿ ಸೋಂಕಿತರ  ಸಂಖ್ಯೆ 20ಕ್ಕೆ ಏರಿಕೆಯಾಗಿದೆ. 

ತಮಿಳುನಾಡಿನಲ್ಲಿ ಇಂದು 102 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆ ಮೂಲಕ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 411ಕ್ಕೆ ಏರಿಕೆಯಾಗಿದೆ. ಚೆನ್ನೈನಲ್ಲಿ 35 ಪ್ರಕರಣಗಳು ಮತ್ತು ಡಿಂಡಿಗಲ್ ನಲ್ಲಿ ಇಂದು 26 ಪ್ರಕರಣಗಳು ದಾಖಲಾಗಿವೆ.

ಕೊರೋನಾ ಸೋಂಕಿಗೆ ತುತ್ತಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ 75 ವರ್ಷದ ಕೋವಿಡ್ 19 ಸೋಂಕು ಪೀಡಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೊರೋನಾ ಸೋಂಕಿಗೆ ತುತ್ತಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಹಳೆ ಬಾಗಲಕೋಟೆ ನಿವಾಸಿ 75 ವರ್ಷದ ವೃದ್ಧ ಶುಕ್ರವಾರ ಚಿಕಿತ್ಸೆ  ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp