ಕೋವಿಡ್ 19: ಮುಂಬೈನ ಧಾರಾವಿ ಪ್ರದೇಶದಲ್ಲಿ ಮೂರನೇ ಕೊರೋನಾ ಸೋಂಕು ಪ್ರಕರಣ ಪತ್ತೆ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಪ್ರಕರಣದ ಏರಿಕೆಯಾಗುತ್ತಲೇ ಇದ್ದು, ಇದೀಗ ವಿಶ್ವದ ಅತೀ ದೊಡ್ಡ ಕೊಳಚೆ ಪ್ರದೇಶ ಎಂಬ ಕುಖ್ಯಾತಿ ಪಡೆದಿರುವ ಧಾರಾವಿಯಲ್ಲಿ ಮೂರನೇ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ.
ಧಾರಾವಿ ಪ್ರದೇಶ
ಧಾರಾವಿ ಪ್ರದೇಶ

ಮುಂಬೈ: ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಪ್ರಕರಣದ ಏರಿಕೆಯಾಗುತ್ತಲೇ ಇದ್ದು, ಇದೀಗ ವಿಶ್ವದ ಅತೀ ದೊಡ್ಡ ಕೊಳಚೆ ಪ್ರದೇಶ ಎಂಬ ಕುಖ್ಯಾತಿ ಪಡೆದಿರುವ ಧಾರಾವಿಯಲ್ಲಿ ಮೂರನೇ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ.

ಧಾರಾವಿಯಲ್ಲಿ ಮುಖ್ಯರಸ್ತೆಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ 35 ವರ್ಷದ ವೈದ್ಯರೊಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಕುರಿತಂತೆ ಬಿಎಂಸಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಇವರು ಖಾಸಗಿ ಆಸ್ಪತ್ರೆಯಲ್ಲಿ ಸರ್ಜನ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು ಎಂದು  ತಿಳಿದುಬಂದಿದೆ. 

ಪ್ರಸ್ತುತ ಈ ವೈದ್ಯರಿದ್ದ ಬಿಲ್ಡಿಂಗ್ ಅನ್ನು ಕ್ವಾರಂಟೈನ್ ಮಾಡಲಾಗಿದ್ದು, ಇವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಗಳಿಗಾಗಿ ಶೋಧನಡೆಸಲಾಗುತ್ತಿದೆ. ಈ ವೈದ್ಯರು ಯಾವುದೇ ರೀತಿಯ ವಿದೇಶಿ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ,
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com