ನಿಜಾಮುದ್ದೀನ್ ಧಾರ್ಮಿಕ ಸಭೆ ಏರ್ಪಡಿಸಿದ ತಬ್ಲಿಘಿ ಜಮಾತ್ ಸಂಘಟನೆಯನ್ನು ನಿಷೇಧಿಸಿ:ಶಿಯಾ ನಾಯಕರ ಒತ್ತಾಯ

ದೇಶದಲ್ಲಿ ತಬ್ಲಿಘಿ ಜಮಾತ್ ಸಂಘಟನೆಯನ್ನು ನಿಷೇಧ ಮಾಡಬೇಕೆಂಬ ಕೂಗು ಹೆಚ್ಚಾಗುತ್ತಿದ್ದು ಶಿಯಾ ಪಾದ್ರಿಗಳು ಕೂಡ ಅದನ್ನು ಒತ್ತಾಯಿಸುತ್ತಿದ್ದಾರೆ.
ನಿಜಾಮುದ್ದೀನ್ ಧಾರ್ಮಿಕ ಸಭೆ ಏರ್ಪಡಿಸಿದ ತಬ್ಲಿಘಿ ಜಮಾತ್ ಸಂಘಟನೆಯನ್ನು ನಿಷೇಧಿಸಿ:ಶಿಯಾ ನಾಯಕರ ಒತ್ತಾಯ

ಲಕ್ನೊ: ದೇಶದಲ್ಲಿ ತಬ್ಲಿಘಿ ಜಮಾತ್ ಸಂಘಟನೆಯನ್ನು ನಿಷೇಧ ಮಾಡಬೇಕೆಂಬ ಕೂಗು ಹೆಚ್ಚಾಗುತ್ತಿದ್ದು ಶಿಯಾ ಪಾದ್ರಿಗಳು ಕೂಡ ಅದನ್ನು ಒತ್ತಾಯಿಸುತ್ತಿದ್ದಾರೆ.

ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲಿಘಿ ಜಮಾತ್ ನಡೆಸಿ ಅಲ್ಲಿಂದ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿರುವುದಕ್ಕೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಉತ್ತರ ಪ್ರದೇಶ ವಕ್ಫ್ ಖಾತೆ ಸಚಿವ ಮೊಹ್ಸಿನ್ ರಾಝಾ, ತಬ್ಲಿಘಿ ಜಮಾತ್ ಒಂದು ಭಯೋತ್ಪಾದಕ ಸಂಘಟನೆಯಾಗಿದೆ ಎಂದಿದ್ದಾರೆ. ಇನ್ನು ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸಿಮ್ ರಿಜ್ವಿ, ಈ ಸಂಘಟನೆ ಆತ್ಮಹತ್ಯಾ ದಾಳಿ ಬಾಂಬ್ ಗಳನ್ನು ತಯಾರಿಸುತ್ತದೆ ಎಂದಿದ್ದಾರೆ. ಇಂತಹ ಸಂಘಟನೆಗಳನ್ನು ನಿಷೇಧಿಸಬೇಕು, ಇವು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿವೆ ಎಂದಿದ್ದಾರೆ.

ಇಡೀ ದೇಶವೇ ಕೊರೋನಾ ಸೋಂಕು ಮಹಾಮಾರಿ ಸಮಸ್ಯೆಯನ್ನು ಎದುರಿಸುತ್ತಿರುವಾಗ ತಬ್ಲಿಘಿ ಜಮಾತ್ ಸಂಘಟನೆ ದೇಶವಿರೋಧಿ ಕೃತ್ಯಗಳನ್ನು ನಡೆಸುವ ಮೂಲಕ ಸರ್ಕಾರದ ಆದೇಶವನ್ನು ಧಿಕ್ಕರಿಸಿದೆ. ಈ ಸಂಘಟನೆಗೆ ಅಂತಾರಾಷ್ಟ್ರೀಯ ಸಂಘಟನೆಗಳಿಂದ ಬರುತ್ತಿರುವ ಹಣದ ಮೂಲವನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com