ಕೊರೋನಾ ವೈರಸ್: ಕೇವಲ 12 ಗಂಟೆಗಳಲ್ಲಿ ಹೊಸ 355 ಕೋವಿಡ್ 19 ಪ್ರಕರಣ ದಾಖಲು, 2,902ಕ್ಕೇರಿದ ಸೋಂಕಿತರ ಸಂಖ್ಯೆ, 68ಸಾವು

ಕೊರೋನಾ ಸೋಂಕು ಹಬ್ಬುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ, ದೇಶವ್ಯಾಪಿ 21 ದಿನಗಳ ಲಾಕ್ ಡೌನ್ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ, ಕೇವಲ 12 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 355ಕ್ಕೆ ಏರಿಕೆಯಾಗಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೊರೋನಾ ಸೋಂಕು ಹಬ್ಬುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ, ದೇಶವ್ಯಾಪಿ 21 ದಿನಗಳ ಲಾಕ್ ಡೌನ್ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ, ಕೇವಲ 12 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 355ಕ್ಕೆ ಏರಿಕೆಯಾಗಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ಶುಕ್ರವಾರ ರಾತ್ರಿವರೆಗೆ 2,547ರಷ್ಟಿದ್ದ ಸೋಂಕಿತರ ಸಂಖ್ಯೆ ಶನಿವಾರ ಬೆಳಿಗ್ಗೆಯಷ್ಟರಲ್ಲಿಯೇ 2,902ಕ್ಕೆ ಏರಿಕೆಯಾಗಿದೆ. ಅಲ್ಲದೆ, ಶನಿವಾರ ಕೂಡ ವೈರಸ್'ಗೆ 5 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 68ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಮಹಾರಾಷ್ಟ್ರದ ಅಮ್ರಾವತಿ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯೊಬ್ಬರು ಕೊರೋನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾರೆ. ಮಹಿಳೆ ಏಪ್ರಿಲ್ 2 ರಂದು ಮೃತಪಟ್ಟಿದ್ದಾರೆಂದು ಅಮ್ರಾವತಿ ಜಿಲ್ಲಾಧಿಕಾರಿ ಶೆಲೆಶ್ ನವಾಲ್ ಅವರು ಹೇಳಿದ್ದಾರೆ. 

ಮಧಅಯಪ್ರದೇಶದ ಛಿಂಡ್ವಾರಾದಲ್ಲಿಯೂ 36 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದು, ಈ ಮೂಲಕ ಆ ರಾಜ್ಯದಲ್ಲಿ ವೈರಸ್'ಗೆ ಸಾವನ್ನಪ್ಪಿದ್ದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಅಲ್ಲದೆ, 155 ಮಂದಿಯಲ್ಲಿ ಸೋಂಕು ದೃಢಪಟ್ಟಿದ ಎಂದು ತಿಳಿದುಬಂದಿದೆ. 

ರಾಜಸ್ತಾನದ ಬಿಕನೇಕ್ ನಲ್ಲಿ 60 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ, ಹೊಸದಾಗಿ 12 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 12 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜಸ್ತಾನ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 41 ಮಂದಿ ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಾಗಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯ ಆಗ್ರಾದಲ್ಲಿ 25 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರಂತೆ ಆಗ್ರಾದಲ್ಲಿ ಸೋಂಕಿತರ ಸಂಖ್ಯೆ 45ಕ್ಕೆ ಏರಿಗೆಯಾಗಿದೆ ಎಂದು ಆಗ್ರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಭು ಎನ್. ಸಿಂಗ್ ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com