ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ

ಕೊರೋನಾ ನಿಗ್ರಹಕ್ಕೆ ಘೋಷಿಸಲಾಗಿದ್ದ ಏ.14ರವರೆಗಿನ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಇತ್ತೀಚೆಗೆ ನಿರ್ಬಂಧಿಸಲಾಗಿತ್ತು. ಆದರೆ, ಮಹತ್ವದ ಬೆಳವಣಿಗೆಯೊಂದರಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ತನ್ನ ದೇಶೀಯ ಮತ್ತು ಅಂತರಾಷ್ಟ್ರೀಯ ಹಾರಾಟಗಳಿಗೆ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ಏ.30ರವರೆಗೂ ವಿಸ್ತರಿಸಿದೆ.

Published: 04th April 2020 09:30 AM  |   Last Updated: 04th April 2020 09:30 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ನವದೆಹಲಿ: ಕೊರೋನಾ ನಿಗ್ರಹಕ್ಕೆ ಘೋಷಿಸಲಾಗಿದ್ದ ಏ.14ರವರೆಗಿನ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಇತ್ತೀಚೆಗೆ ನಿರ್ಬಂಧಿಸಲಾಗಿತ್ತು. ಆದರೆ, ಮಹತ್ವದ ಬೆಳವಣಿಗೆಯೊಂದರಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ತನ್ನ ದೇಶೀಯ ಮತ್ತು ಅಂತರಾಷ್ಟ್ರೀಯ ಹಾರಾಟಗಳಿಗೆ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ಏ.30ರವರೆಗೂ ವಿಸ್ತರಿಸಿದೆ. 

ಇದು ಲಾಕ್ ಲೌನ್ ಅವಧಿಯ ಬಳಿಕವೂ ಮತ್ತೆ ಒಂದು ವಾರದ ಅವಧಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ದಿನಗಳ ಕಾಲ ಎಲ್ಲಾ ರೀತಿಯ ವಿಮಾನಯಾನ ಸೇವೆಗಳನ್ನು ನಿಷೇಧಿಸಬಹುದು ಎಂಬ ವದಂತಿಗಳು ಹರಡಲು ಆರಂಭವಾಗಿದೆ. 

ಇಂಡಿಗೋ ವಕ್ತಾರರು ಮಾತನಾಡಿ, ಅಂತರಾಷ್ಟ್ರೀಯ ವಿಮಾನಗಳ ಬುಕಿಂಗ್ ಗಳನ್ನು ನಿಷೇಧಿಸಲಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿನ ವಾಣಿಜ್ಯ ವಿಮಾನಗಳನ್ನು ಏಪ್ರಿಲ್ 14ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. 

ಏರ್ ಇಂಡಿಯಾ ವಕ್ತಾರ ಮಾತನಾಡಿ, ಏಪ್ರಿಲ್ 3 ರಿಂದ ಏಪ್ರಿಲ್ 30 ರವರೆಗೂ ಎಲ್ಲಾ ವಿಮಾನ ಬುಕ್ಕಿಂಗ್ ಗಳನ್ನು ನಿಷೇಧಿಸಲಾಗಿದೆ. ಏಪ್ರಿಲ್ 14ರ ಬಳಿಕ ವಿಮಾನಯಾನ ಸಚಿವಾಲಯದ ನಿರ್ಧಾರದ ಕುರಿತು ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp