ಮನೆಯಲ್ಲಿ ತಯರಾಯಿಸಿದ ಮಾಸ್ಕ್ ಧರಿಸಿ: ಜನತೆಗೆ ಕೇಂದ್ರ ಸರ್ಕಾರ ಸಲಹೆ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದರಿಂದ ರಕ್ಷಿಸಿಕೊಳ್ಳಲು ಮನೆಯಲ್ಲಿಯೇ ತಯಾರಿಸಿದ ಮಾಸ್ಕ್ ಗಳನ್ನು ಧರಿಸುವಂತೆ ಕೇಂದ್ರ ಸರ್ಕಾರ ದೇಶದ ಜನತೆಗೆ ಸಲಹೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದರಿಂದ ರಕ್ಷಿಸಿಕೊಳ್ಳಲು ಮನೆಯಲ್ಲಿಯೇ ತಯಾರಿಸಿದ ಮಾಸ್ಕ್ ಗಳನ್ನು ಧರಿಸುವಂತೆ ಕೇಂದ್ರ ಸರ್ಕಾರ ದೇಶದ ಜನತೆಗೆ ಸಲಹೆ ನೀಡಿದೆ.

ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಜನ ಮನೆಯಿಂದ ಹೊರಗೆ ಬಂದಾಗ ಮುಖ ಮತ್ತು ಬಾಯಿಗೆ ರಕ್ಷಣೆ ನೀಡಬಲ್ಲಂತಹ ಮನೆಯಲ್ಲಿಯೇ ತಯಾರಿಸಿದ, ಮರು ಬಳಕೆ ಮಾಡಬಹುದಾದ ಮಾಸ್ಕ್ ನ್ನು ಧರಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ಯಾವುದೇ ಆರೋಗ್ಯ ಸಮಸ್ಯೆ ಇಲ್ಲದವರು ಮತ್ತು ಉಸಿರಾಟದ ಸಮಸ್ಯೆ ಇಲ್ಲದವರು ಮನೆಯಲ್ಲಿ ಕೈಯಿಂದಲೇ ತಯಾರಿಸಿದ ಮಾಸ್ಕ್ ಧರಿಸಿಬಹುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ 2,900ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com