ಗುಜರಾತ್'ನಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಲಾರಿ ಡಿಕ್ಕಿ- 5 ಸಾವು, ಓರ್ವನಿಗೆ ಗಾಯ

ಗುಜರಾತ್ ರಾಜ್ಯದ ಸುರೇಂದ್ರನಗರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ-ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ದುರ್ಮರಣವನ್ನಪ್ಪಿದ್ದು, ಓರ್ವನಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಶನಿವಾರ ಸಂಭವಿಸಿದೆ. 

Published: 04th April 2020 08:57 AM  |   Last Updated: 04th April 2020 08:57 AM   |  A+A-


Gujarat: Five people killed, one injured after a car rammed into a truck in Limbdi

ಗುಜರಾತ್'ನಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಲಾರಿ ಡಿಕ್ಕಿ- 5 ಸಾವು, ಓರ್ವನಿಗೆ ಗಾಯ

Posted By : Manjula VN
Source : ANI

ಸುರೇಂದ್ರನಗರ್: ಗುಜರಾತ್ ರಾಜ್ಯದ ಸುರೇಂದ್ರನಗರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ-ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ದುರ್ಮರಣವನ್ನಪ್ಪಿದ್ದು, ಓರ್ವನಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಶನಿವಾರ ಸಂಭವಿಸಿದೆ. 

ಲಿಂಬ್ಡಿ-ಅಹಮದಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp