ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯಯುತ ಗಂಡು ಮಗುವಿಗೆ ಜನ್ಮ ನೀಡಿದ ಕೊರೋನಾ ಪೀಡಿತ ಮಹಿಳೆ!

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ದೆಹಲಿಯ ಏಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯಯುತ ಗಂಡು ಮಗುವಿಗೆ ಜನ್ಮ ನೀಡಿದ ಕೊರೋನಾ ಪೀಡಿತ ಮಹಿಳೆ!

ನವದೆಹಲಿ: ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ದೆಹಲಿಯ ಏಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಕೊರೋನಾ ಸೋಂಕು ಇರುವುದು ಪತ್ತೆಯಾದ ಕೂಡಲೇ ಪ್ರತ್ಯೇಕ ವಾರ್ಡ್ ಗೆ ಶಿಫ್ಟ್ ಆಗಿದ್ದ ತುಂಬು ಗರ್ಭಿಣಿ ನಿನ್ನೆ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ಮಹಿಳೆಯ ಪತಿ ಆಸ್ಪತ್ರೆಯ ವೈದ್ಯರಿಗೂ ಕೊರೋನಾ ಸೋಂಕು ಬಂದಿದ್ದು ಅವರು ಏಮ್ಸ್ ಆಸ್ಪತ್ರೆಯ ಶರೀರಶಾಸ್ತ್ರ ವಿಭಾಗದಲ್ಲಿ ವೈದ್ಯರಾಗಿದ್ದಾರೆ.

ಕಳೆದ ವಾರ ವೈದ್ಯ, ಅವರ ಪತ್ನಿ ಮತ್ತು ಸೋದರನಿಗೆ ಕೊರೋನಾ ಪತ್ತೆಯಾಗಿತ್ತು. 20-25ರ ಹರೆಯದ ವೈದ್ಯ ಪತ್ನಿ 39 ವಾರಗಳ ತುಂಬು ಗರ್ಭಿಣಿಯಾಗಿದ್ದರು. ಈ ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ.

ಸದ್ಯ ತಾಯಿ ಮಗು ಇಬ್ಬರ ಆರೋಗ್ಯವೂ ಸ್ಥಿರವಾಗಿದೆ. ಮಗುವಿನಲ್ಲಿ ಇನ್ನೂ ಕೊರೋನಾ ಸೋಂಕು ಕಾಣಿಸಿಕೊಂಡಿಲ್ಲ. ಆದರೂ ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ಮಗುವಿನ ಮೇಲೆ ಯಾವುದೇ ಪರೀಕ್ಷೆ ನಡೆಸಿಲ್ಲ, ಏನಾದರೂ ಲಕ್ಷಣ ಕಂಡುಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಆಸ್ಪತ್ರೆಯ ವೈದ್ಯೆ ನೀರಜ ಭಾಟ್ಲಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com