ಕ್ಯಾಂಡಲ್ ಬೆಳಗಿಸುವುದರಿಂದ ಕೊರೋನಾ ಬಿಕ್ಕಟ್ಟು ಬಗೆಹರಿಯುವುದಿಲ್ಲ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಭಾನುವಾರ ರಾತ್ರಿ 9 ಗಂಟೆಗೆ ಎಲ್ಲರೂ ಮನೆಯ ಲೈಟ್ ಆಫ್ ಮಾಡಿ ದೀಪ ಬೆಳಗಿಸುವುಂತೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕ್ಯಾಂಡಲ್
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಭಾನುವಾರ ರಾತ್ರಿ 9 ಗಂಟೆಗೆ ಎಲ್ಲರೂ ಮನೆಯ ಲೈಟ್ ಆಫ್ ಮಾಡಿ ದೀಪ ಬೆಳಗಿಸುವುಂತೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕ್ಯಾಂಡಲ್ ಬೆಳಗಿಸುವುದರಿಂದ ಕೊರೋನಾ ಸಮಸ್ಯೆ ಬಗೆಹರಿಯವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊವಿಡ್-19 ಪರೀಕ್ಷೆಗಳು ನಡೆಯುತ್ತಿಲ್ಲ. ಜನ ಚಪ್ಪಾಳೆ ತಟ್ಟುವುದರಿಂದ ಮತ್ತು ಆಕಾಶಕ್ಕೆ ಟಾರ್ಚ್ ಬೀಡುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭಾರತ ಹಾಗೂ ಇತರೆ ದೇಶಗಳು ಪ್ರತಿ ಮಿಲಿಯನ್ ಜನರಲ್ಲಿ ಎಷ್ಟು ಜನರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂಬ ತಮ್ಮ ಚಾರ್ಟ್ ಅನ್ನು ಸಹ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಅದರಲ್ಲಿ ಭಾರತ ಪ್ರತಿ ಮಿಲಿಯನ್ ಜನತೆಗೆ 29 ಮಂದಿಯನ್ನು ಮಾತ್ರ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ. ಪಾಕಿಸ್ತಾನ ಪ್ರತಿ ಮಿಲಿಯನ್ ಗೆ 67, ಶ್ರೀಲಂಕಾ 97, ಇಂಗ್ಲೆಂಡ್ 1891, ಅಮೆರಿಕ 2732, ಜರ್ಮನಿ 5812 ಮತ್ತು ಇಟಲಿ 7122 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದೆ.

ಭಾನುವಾರ ರಾತ್ರಿ 9 ಗಂಟೆಗೆ, 9 ನಿಮಿಷಗಳ ಕಾಲ ಎಲ್ಲರಗೂ ಮನೆಯ ಲೈಟ್ ಆಫ್ ಮಾಡಿ, ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಗಿಸುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದು, ಈ ಬಗ್ಗೆ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com