ರಾಜಕೀಯ ಪಕ್ಷಗಳ ನಾಯಕರುಗಳೊಂದಿಗೆ ಏ. 8ರಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ಕೊರೋನಾ ವೈರಸ್ ಮಹಾಮಾರಿ ವಿರುದ್ದ ದೇಶ ಒಗ್ಗಟ್ಟಿನಿಂದ ಹೋರಾಡುತ್ತಿರುವ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಂವಾದ ನಡೆಸಲು ಪ್ರಧಾನಿ ಮೋದಿ ತೀರ್ಮಾನಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ವೈರಸ್ ಮಹಾಮಾರಿ ವಿರುದ್ದ ದೇಶ ಒಗ್ಗಟ್ಟಿನಿಂದ ಹೋರಾಡುತ್ತಿರುವ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಂವಾದ ನಡೆಸಲು ಪ್ರಧಾನಿ ಮೋದಿ ತೀರ್ಮಾನಿಸಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಶನಿವಾರ ನೀಡಿರುವ ಮಾಹಿತಿಯ ಪ್ರಕಾರ ಸಂಸತ್ತಿನ ಉಭಯ ಸದನಗಳಲ್ಲಿ ಐದಕ್ಕೂ ಹೆಚ್ಚು ಸಂಸದರನ್ನು ಹೊಂದಿರುವ ಪಕ್ಷಗಳ ಸದನ ನಾಯಕರೊಂದಿಗೆ ಮೋದಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮ ಈ ತಿಂಗಳು ೮ರಂದು ಬೆಳಿಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ.

ಕೋವಿಡ್-19 ಮಹಾಮಾರಿಯನ್ನು ಎದುರಿಸುವುದು, ದೇಶವ್ಯಾಪ್ತಿ ಜಾರಿಗೊಳಿಸಿರುವ ಅಷ್ಟ ದಿಗ್ಬಂಧನದಂತಹ ಕ್ರಮಗಳ ಬಗ್ಗೆ ಮೋದಿ ಚರ್ಚಿಸುವ ಅವಕಾಶ ವಿದೆ. ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಪ್ರಧಾನಿ ಮೋದಿ ಪ್ರತಿಪಕ್ಷಗಳೊಂದಿಗೆ ಮೊದಲ ಬಾರಿ ಮಾತನಾಡಲಿದ್ದಾರೆ.

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಕೋವಿಡ್ -೧೯ ಕುರಿತು ವಾಟ್ಸಾಪ್ ಹೆಲ್ಪ್‌ಡೆಸ್ಕ್ ಸಂಖ್ಯೆಯನ್ನು ಪ್ರಕಟಿಸಿದ್ದು ಈ ಸಂಖ್ಯೆ: 9013151515.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com