ಮಧ್ಯಪ್ರದೇಶ: ಮನೆಯಲ್ಲಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ದ್ವಿಗಿಜಯ್ ಸಿಂಗ್ ಒತ್ತಾಯ

ಲಾಕ್ ಡೌನ್ ವೇಳೆಯಲ್ಲಿ ಮನೆಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸುವಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಒತ್ತಾಯಿಸಿದ್ದಾರೆ.
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್

ಭೋಪಾಲ್: ಲಾಕ್ ಡೌನ್ ವೇಳೆಯಲ್ಲಿ ಮನೆಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸುವಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಒತ್ತಾಯಿಸಿದ್ದಾರೆ.

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಪಂಜಾಬಿನಂತೆ ಮಧ್ಯಪ್ರದೇಶದಲ್ಲಿಯಬ ಮಧ್ಯಾಹ್ನದ ಬಿಸಿಯೂಟ  ಯೋಜನೆಗೆ ನೋಂದಾಯಿಸಲ್ಪಟ್ಟಿರುವ ವಿದ್ಯಾರ್ಥಿಗಳಿಗೆ ಆಹಾರ ಪೂರೈಸುವಂತೆ  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ದಿಗ್ವಿಜಯ್ ಸಿಂಗ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಈ ಮಧ್ಯೆ ಮಧ್ಯಪ್ರದೇಶ ಆರೋಗ್ಯ ಇಲಾಖೆಯ ಇಬ್ಬರು ಹಿರಿಯ ಅಧಿಕಾರಿಗಳಲ್ಲಿ ಕೋವಿಡ್- 19 ಪಾಸಿಟಿವ್ ದೃಢಪಟ್ಟಿದೆ. ನಂತರ ಭೋಪಾಲ್ ಆರೋಗ್ಯ ಇಲಾಖೆ ನಿರ್ದೇಶಕ ಜೆ. ವಿಜಯ್ ಕುಮಾರ್ ಅವರನ್ನು ಕ್ವಾರಂಟೈನಲ್ಲಿಡಲಾಗಿದೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ 3,374 ಮಂದಿ ಈ ಸೋಂಕಿಗೆ ತುತ್ತಾಗಿದ್ದು, 267 ಮಂದಿ ಗುಣಮುಖರಾಗಿದ್ದಾರೆ. 77 ಮಂದಿ ಸಾವನ್ನಪ್ಪಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com