ಟೆಸ್ಟ್ ಮೋರ್ ಸೇವ್ ಇಂಡಿಯಾ: ಹೆಚ್ಚಿನ ಪ್ರಮಾಣದ ಪರೀಕ್ಷೆ ನಡೆಯಬೇಕು- ಪ್ರಿಯಾಂಕಾ ಗಾಂಧಿ ವಾದ್ರಾ

ಕೊರೋನಾ ವೈರಸ್ ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗವೆಂದರೆ ಜನರು  ಹೆಚ್ಚೆಚ್ಚು ಪರೀಕ್ಷೆಗಾಗಿ ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. 
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ

ನವದೆಹಲಿ: ಕೊರೋನಾ ವೈರಸ್ ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗವೆಂದರೆ ಜನರು  ಹೆಚ್ಚೆಚ್ಚು ಪರೀಕ್ಷೆಗಾಗಿ ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. 

ಸಾಧ್ಯವಾದಷ್ಟು ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಯಬೇಕು, ಪರೀಕ್ಷಾ ಮಟ್ಟ ಹೆಚ್ಚಾಗಬೇಕು, ಹಾಗೂ ಸೋಂಕಿತ ಜನರಿಗೆ ಚಿಕಿತ್ಸೆ ನೀಡಬೇಕು ಇದು ನಮ್ಮ ಮಂತ್ರವಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಏಕೈಕ ಮಾರ್ಗವೆಂದರೆ ಹೆಚ್ಚೆಚ್ಚು ಪರೀಕ್ಷೆ ಮಾಡಿಸಿಕೊಳ್ಳುವುದು, ಇದರಿಂದ ಮಾತ್ರ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಬಹುದಾಗಿದೆ. ಹೆಚ್ಚಿನ ಪ್ರಮಾಣದ ಪರೀಕ್ಷೆಗಾಗಿ ಧ್ವನಿ ಎತ್ತಬೇಕೆಂಬುದು ನನ್ನ ಮನವಿಯಾಗಿದೆ ಎಂದು ಟೆಸ್ಟ್ ಮೋರ್ ಸೇವ್ ಇಂಡಿಯಾ ಎಂಬ ಹ್ಯಾಷ್ ಟ್ಯಾಗ್ ಬಳಸಿ ಅವರು ಅವರು ಮನವಿ ಮಾಡಿದ್ದಾರೆ.

ಹೆಚ್ಚಿನ ಪರೀಕ್ಷೆಗೆ ಕರೆ ನೀಡಿರುವ ಕಾಂಗ್ರೆಸ್, ದೇಶದ ಜನಸಂಖ್ಯೆಗೆ ತಕ್ಕ ಹಾಗೆ ಪರೀಕ್ಷೆ ನಡೆಯುತ್ತಿಲ್ಲ,  ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ  ಪರೀಕ್ಷೆ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com