ಆರ್ಥಿಕತೆ ಪುನರುಜ್ಜೀವನಗೊಳಿಸಬಹುದು ಆದರೆ, ಜನರ ಜೀವ ಸಾಧ್ಯವಿಲ್ಲ: ಲಾಕ್ ಡೌನ್ ಅವಧಿ ವಿಸ್ತರಿಸಲು ಕೇಂದ್ರಕ್ಕೆ ಕೆಸಿಆರ್ ಮನವಿ

ಕುಸಿಯುತ್ತಿರುವ ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಬಹುದು. ಆದರೆ, ಜನರ ಜೀವ ಸಾಧ್ಯವಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ಅವರು ಹೇಳಿದ್ದಾರೆ. 
ಕೆ.ಸಿ.ಚಂದ್ರಶೇಖರ್
ಕೆ.ಸಿ.ಚಂದ್ರಶೇಖರ್

ನವದೆಹಲಿ: ಕುಸಿಯುತ್ತಿರುವ ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಬಹುದು. ಆದರೆ, ಜನರ ಜೀವ ಸಾಧ್ಯವಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರು ಹೇಳಿದ್ದಾರೆ. 

ದೇಶದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವ ಚಂದ್ರಶೇಖರ್ ರಾವ್ ಅವರು, ಕುಸಿಯುತ್ತಿರುವ ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಬಹುದು. ಆದರೆ, ಜನರ ಜೀವ ಸಾಧ್ಯವಿಲ್ಲ, ಹೀಗಾಗಿ ಲಾಕ್'ಡೌನ್ ಮುಂದುವರೆಸಿ ಎಂದು ಹೇಳಿದ್ದಾರೆ. 

ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿರುವ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ವಿಪರೀತವಾಗುತ್ತಿದೆ ಈ ಕಾರಣ ಇದೆ 14 ವರೆಗೆ ಆದೇಶಿಸಿದ್ದ ಲಾಕ್ ಡೌನ್ ನ್ನು ವಿಸ್ತರಣೆ ಮಾಡುವಂತೆ ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com