ಕೊರೋನಾ ವೈರಸ್: ದೇಶದಲ್ಲಿ ತಯಾರಾಗುವ 24 ಔಷಧಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ದೇಶೀಯ ನಿರ್ಮಿತ 24 ಔಷಧಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ದೇಶೀಯ ನಿರ್ಮಿತ 24 ಔಷಧಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಕೇಂದ್ರ ಸರ್ಕಾರ ದೇಶೀ ನಿರ್ಮಿತ ಕೆಲ ಔಷಧಿಗಳ ಮೇಲೆ ನಿರ್ಬಂಧ ಹೇರಿತ್ತು. ಈ ಔಷಧಿಗಳನ್ನು ರಫ್ತು ಮಾಡದಂತೆ ಸೂಚನೆ ನೀಡಿತ್ತು. ಆದರೆ ಈಗ ವಿಶ್ವಾದ್ಯಂತ ಕೊರೋನಾ ವೈರಸ್ ರೋಗಿಗಳ ಸಂಖ್ಯೆ  ಗಣನೀಯವಾಗಿ ಹೆಚ್ಚಾಗುತ್ತಿದ್ದು, ಈ ಔಷಧಿಗಳ ಬೇಡಿಕೆ ಕೂಡ ಹೆಚ್ಚಾಗಿದೆ. ಇದೇ ಕಾರಣಕ್ಕೆ ಇದೀಗ ಮನಸ್ಸು ಬದಲಿಸಿರುವ ಕೇಂದ್ರ ಸರ್ಕಾರ ಈ ಔಷಧಿಗಳ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದೆ.

ಭಾರತದಲ್ಲಿ ತಯಾರಾಗುವ ಪ್ಯಾರಸಿಟಮಲ್ ಗಳು, ಪೇಯ್ನ್ ಕಿಲ್ಲರ್ ಗಳು, ಇತರೆ ಸಂಯೋಜಕ ಔಷಧಿಗಳ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. 

ಔಷಧಿಗಾಗಿ ಭಾರತಕ್ಕೆ ಅಮೆರಿಕ ಸೇರಿದಂತೆ 30ಕ್ಕೂ ಹೆಚ್ಚು ದೇಶಗಳ ಮನವಿ
ಇನ್ನು ಭಾರತ ಸರ್ಕಾರ ರಫ್ತು ನಿಷೇಧಿಸಿರುವ Hydroxychloroquine ಔಷಧಿಗಾಗಿ ಅಮೆರಿಕ ಸೇರಿದಂತೆ ವಿಶ್ವದ 30ಕ್ಕೂ ಅಧಿಕ ರಾಷ್ಟ್ರಗಳು ಭಾರತಕ್ಕೆ ದುಂಬಾಲು ಬೀಳುತ್ತಿವೆ. ಈ ಹಿಂದೆ ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ  ಮಾಡಿ ಅಮೆರಿಕಕ್ಕೆ ಹೆಚ್ಚಿನ ಪ್ರಮಾಣದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಕೆ ಮಾಡುವಂತೆ ಮನವಿ ಮಾಡಿದ್ದರು. ಟ್ರಂಪ್ ಬಳಿಕ ಇದೀಗ 30 ರಾಷ್ಟ್ರಗಳ ಪ್ರಧಾನಿಗಳು ಮೋದಿ ಅವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ರಫ್ತು ಮಾಡುವಂತೆ ಮನವಿ ಮಾಡಿವೆ. ಕೊರೋನಾ ವೈರಸ್ ಗೆ  ರಾಮಬಾಣವಾಗಿ ಮಲೇರಿಯಾ ಔಷಧ ಕೆಲಸ ಮಾಡುತ್ತದೆ ಎಂದು ಆರೋಗ್ಯ ಇಲಾಖೆ, ಆರೋಗ್ಯ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರ್ಕಾರ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತಿಗೆ ನಿಷೇಧ ಹೇರಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com