ಕೊರೋನಾ ಲಾಕ್'ಡೌನ್: ಬಿಹಾರದಲ್ಲಿ ಕರ್ತವ್ಯಕ್ಕೆ ಗೈರು ಹಾಜರಾದ 198 ವೈದ್ಯರು

ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಎಂಬ ಪಿಡುಗನ್ನು ಹೋಗಲಾಡಿಸಲು ದೇಶದಲ್ಲಿರು ಪ್ರತೀ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಶ್ರಮಪಡುತ್ತಿರುವ ನಡುವಲ್ಲೇ ಬಿಹಾರ ರಾಜ್ಯದಲ್ಲಿರುವ ವೈದ್ಯರು ಇದಕ್ಕೆ ತದ್ವಿರುದ್ಧವಾಗಿ ವರ್ತನೆ ತೋರುತ್ತಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಾಟ್ನ: ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಎಂಬ ಪಿಡುಗನ್ನು ಹೋಗಲಾಡಿಸಲು ದೇಶದಲ್ಲಿರು ಪ್ರತೀ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಶ್ರಮಪಡುತ್ತಿರುವ ನಡುವಲ್ಲೇ ಬಿಹಾರ ರಾಜ್ಯದಲ್ಲಿರುವ ವೈದ್ಯರು ಇದಕ್ಕೆ ತದ್ವಿರುದ್ಧವಾಗಿ ವರ್ತನೆ ತೋರುತ್ತಿದ್ದಾರೆ. 

ಮಾರ್ಚ್ 31, ಏಪ್ರಿಲ್1 ಮತ್ತು 2ನೇ ತಾರೀಖಿನ ದಿನದಂದು ಬಿಹಾರ ರಾಜ್ಯದಲ್ಲಿ ಸುಮಾರು 198 ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. 

ವೈದ್ಯಕೀಯ ಸಿಬ್ಬಂದಿಗಳು ಗೈರು ಹಾಜರಾಗಿರುವುದನ್ನು ಇದೀಗ ಅಲ್ಲಿನ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಗೈರಾದ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ. 

ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ರಜೆಗಳನ್ನು ಏಪ್ರಿಲ್ 30ರವರೆಗೂ ರದ್ದು ಮಾಡಲಾಗಿತ್ತು. ಬಿಹಾರ ರಾಜ್ಯದಲ್ಲಿ ಈ ವರೆಗೂ 32 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಹಾರ ರಾಜ್ಯ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು, ಸಾಂಕ್ರಾಮಿಕ ರೋಗ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ಅಡಿಯಲ್ಲಿ ಗೈರು ಹಾಜರಾದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೂಡ ಕೇಳಲಾಗಿದೆ. ಈ ನಡುವೆ ತೀವ್ರವಾಗಿ ಉಸಿರಾಟ ಸಮಸ್ಯೆ ಇರುವ ರೋಗಿಗಳನ್ನು ತಪಾಸಣೆಗೊಳಪಡಿಸುವುದು ಕಡ್ಡಾಯ ಮಾಡಲಾಗಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com