ಕೊರೋನಾ ವೈರಸ್: 24 ಗಂಟೆಗಳಲ್ಲಿ 20 ಸಾವು, 591 ಹೊಸ ಪಾಸಿಟಿವ್ ಪ್ರಕರಣ, ಸೋಂಕಿತರ ಸಂಖ್ಯೆ 5,865ಕ್ಕೆ ಏರಿಕೆ

ದೇಶದಲ್ಲಿ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 20 ಮಂದಿ ಸಾವಿಗೀಡಾಗಿದ್ದು, ಆ ಮೂಲಕ ಭಾರತದಲ್ಲಿ ಸಾವಿನ ಸಂಖ್ಯೆ 169ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 20 ಮಂದಿ ಸಾವಿಗೀಡಾಗಿದ್ದು, ಆ ಮೂಲಕ ಭಾರತದಲ್ಲಿ ಸಾವಿನ ಸಂಖ್ಯೆ 169ಕ್ಕೆ ಏರಿಕೆಯಾಗಿದೆ.

ಅಂತೆಯೇ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 591 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5,865ಕ್ಕೆ ಏರಿಕೆಯಾಗಿದೆ. ಇನ್ನು ಈ ವರೆಗೂ 477 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಸಚಿವಾಲಯ  ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 20 ಸಾವು
ಕೇವಲ 24 ಗಂಟೆಗಳ ಅವಧಿಯಲ್ಲಿ ಕೊರೋನಾ ವೈರಸ್ ಗೆ 20 ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಆ ಮೂಲಕ ಭಾರತದಲ್ಲಿ ಸಾವಿನ ಸಂಖ್ಯೆ 169ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಇಂದು 8 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ  ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಇದು ದೇಶದಲ್ಲೇ ಅತ್ಯಂತ ಹೆಚ್ಚು ಕೊರೋನಾ ವೈರಸ್ ಸಾವು ಕಂಡ ರಾದಜ್ಯ ಎಂಬ ಕುಖ್ಯಾತಿಗೂ ಮಹಾರಾಷ್ಟ್ರ ತುತ್ತಾಗಿದೆ.

ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ತಲಾ ಮೂರು ಮಂದಿ ಸೋಂಕಿತರು  ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಇಬ್ಬರು, ಪಂಜಾಬ್, ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡಿನಲ್ಲಿ ತಲಾ ಒಬ್ಬರು ಸೋಂಕಿತರು ಮೃತರಾಗಿದ್ದಾರೆ. ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ತಲಾ 16 ಮಂದಿ ಸಾವನ್ನಪ್ಪಿದ್ದು, ದೆಹಲಿಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ಪಂಜಾಬ್ ಮತ್ತು ತಮಿಳುನಾಡಿನಲ್ಲಿ ತಲಾ 8 ಸೋಂಕಿತರು ಸಾವನ್ನಪ್ಪಿದ್ದು, ತೆಲಂಗಾಣದಲ್ಲಿ ಈ ವರೆಗೂ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ಪಶ್ಚಿಮ ಬಂಗಾಳ ಮತ್ತು ಕರ್ನಾಟಕದಲ್ಲಿ ತಲಾ ಐದು ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆಂಧ್ರಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು  ಉತ್ತರ ಪ್ರದೇಶ ರಾಜ್ಯಗಳಲ್ಲಿ ತಲಾ 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಹರ್ಯಾಣ ಮತ್ತು ರಾಜಸ್ಥಾನದಲ್ಲಿ ಈ ವರೆಗೂ ತಲಾ ಮೂರು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.  ಕೇರಳ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಇಬ್ಬರು ಸೋಂಕಿತರು  ಸಾವನ್ನಪ್ಪಿದ್ದಾರೆ.

ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿ ಅನ್ವಯ, ದೇಶದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 5,865ಕ್ಕೆ ಏರಿಕೆಯಾಗಿದ್ದು, ಈ ಪೈಕಿ 71 ಮಂದಿ ವಿದೇಶಿಗರೂ ಸೇರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com