ಲಾಕ್ ಡೌನ್: ಕೊರಿಯರ್, ಪಾರ್ಸೆಲ್ ಸೇವೆಗೆ ಸರ್ಕಾರದಿಂದ ಶೀಘ್ರ ಅನುಮತಿ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಇದ್ದು, ಲಾಕ್ ಡೌನ್ ನಡುವೆಯೂ ಕೆಲವು ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಇದ್ದು, ಲಾಕ್ ಡೌನ್ ನಡುವೆಯೂ ಕೆಲವು ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಇದೀಗ ಕೇಂದ್ರ ಸರ್ಕಾರ ಕೊರಿಯರ್ ಮತ್ತು ಪಾರ್ಸೆಲ್ ಸೇವೆಗಳಿಗೂ ಅನುಮತಿ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಇತರ ವಸ್ತುಗಳನ್ನು ದೇಶದ ವಿವಿಧ ಭಾಗಗಳಿಗೆ ರವಾನಿಸಬೇಕಾದ ದೊಡ್ಡ ರಾಶಿಯೇ ಇದೆ. ಹೀಗಾಗಿ ಶೀಘ್ರದಲ್ಲೇ ಕೊರಿಯರ್ ಮತ್ತು ಪಾರ್ಸೆಲ್ ಸೇವೆಗೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಉದ್ಯಮ ವಲಯದಲ್ಲಿ ದಾಖಲೆಗಳ ವಿನಿಮಯ ಅತ್ಯಂತ ಮಹತ್ವದ್ದಾಗಿದ್ದು, ಕೊರಿಯರ್ ಸೇವೆ ಮತ್ತು ಪಾರ್ಸೆಲ್ ಸೇವೆಗೆ ಅನುಮತಿ ನೀಡುವ ಕುರಿತು ಶೀಘ್ರದಲ್ಲೇ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, ಕನಿಷ್ಠ ಉದ್ಯೋಗಿಗಳೊಂದಿಗೆ ರಫ್ತು ಚಟುವಟಿಕೆಗಳಲ್ಲಿ ತೊಡಗಿರುವ ಕಾರ್ಖಾನೆಗಳ ಕಾರ್ಯಾಚರಣೆಯನ್ನು ಆರಂಭಿಸಲು ಅನುಮತಿ ನೀಡಬೇಕು ಎಂದು ವಾಣಿಜ್ಯ ಸಚಿವಾಲಯ, ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com