ಅಸ್ಸಾಂನಲ್ಲಿ ಕೊರೋನಾಗೆ ಮೊದಲ ಸಾವು, ಭಾರತದಲ್ಲಿ 6 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಅಸ್ಸಾಂ ರಾಜ್ಯದಲ್ಲಿ ಮೊದಲ ಕೋವಿಡ್-19 ಸಾವು ಪ್ರಕರಣ ಶುಕ್ರವಾರ ವರದಿಯಾಗಿದೆ.ಅಸ್ಸಾಂನ ಸಿಲ್ಚರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮ ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಕೊರೋನಾಗೆ ಮೊದಲ ಸಾವು, ಭಾರತದಲ್ಲಿ 6 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೆಹಲಿ: ಅಸ್ಸಾಂ ರಾಜ್ಯದಲ್ಲಿ ಮೊದಲ ಕೋವಿಡ್-19 ಸಾವು ಪ್ರಕರಣ ಶುಕ್ರವಾರ ವರದಿಯಾಗಿದೆ.ಅಸ್ಸಾಂನ ಸಿಲ್ಚರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮ ತಿಳಿಸಿದ್ದಾರೆ.

ಕಳೆದ ಗುರುವಾರ ಅಸ್ಸಾಂನಲ್ಲಿ 65 ವರ್ಷದ ನಿವೃತ್ತ ಬಿಎಸ್ಎಫ್ ಯೋಧನ ಪರಿಸ್ಥಿತಿ ತೀವ್ರ ಹದಗೆಟ್ಟಿತ್ತು. ಅವರನ್ನು ಸಿಲ್ಚರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಕಳೆದ ಮಂಗಳವಾರ ರಾತ್ರಿ ಇವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಕಳೆದ ತಿಂಗಳು ಸೌದಿ ಅರೇಬಿಯಾದಿಂದ ಬಂದಿದ್ದರು. ನಂತರ ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು.

ಅಸ್ಸಾಂನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28ಕ್ಕೇರಿದೆ. ಭಾರತದಲ್ಲಿ ಇದುವರೆಗೆ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 5 ಸಾವಿರದ 865ಕ್ಕೇರಿದೆ. ಸಾವಿನ ಸಂಖ್ಯೆ 169ಕ್ಕೇರಿದೆ. ಒಡಿಶಾ ರಾಜ್ಯ ದೇಶದಲ್ಲಿ ಮೊದಲ ಬಾರಿಗೆ ಲಾಕ್ ಡೌನ್ ನ್ನು ಏಪ್ರಿಲ್ 30ರವರೆಗೆ ವಿಸ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 591 ಹೊಸ ಸೋಂಕಿತ ಪ್ರಕರಣಗಳು, 20 ಸಾವಿನ ಪ್ರಕರಣಗಳು ವರದಿಯಾಗಿವೆ. ಇವರಲ್ಲಿ 5 ಸಾವಿರದ 218 ಸೋಂಕಿತರು, 478 ಗುಣಮುಖ ಹೊಂದಿದ ಪ್ರಕರಣಗಳು ಮತ್ತು 169 ಸಾವಿನ ಪ್ರಕರಣಗಳು ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com