ಕೊವಿಡ್-19 ಕುರಿತು ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ಚರ್ಚೆ ಫಲಪ್ರದ: ಪ್ರಧಾನಿ ಮೋದಿ

ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ನಡೆಸಿದ ಚರ್ಚೆ ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ನಡೆಸಿದ ಚರ್ಚೆ ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಭಾರತ-ಜಪಾನ್ ವಿಶೇಷ ಕಾರ್ಯತಂತ್ರವೂ ಜಾಗತಿಕ ಸಹಭಾಗಿತ್ವದೊಂದಿಗೆ ಕೊವಿಡ್-19 ವಿರುದ್ಧದ ಹೋರಾಟಕ್ಕೆ ಹೊಸ ತಂತ್ರಜ್ಞಾನಗಳು ಮತ್ತು ಪರಿಹಾರಗಳನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಜಗತ್ತಿನಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಶಿಂಜೋ ಅಬೆ ಜೊತೆ ಮಾತನಾಡಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕೊವಿಡ್-19 ಕುರಿತು ನನ್ನ ಸ್ನೇಹಿತ ಜಪಾನ್ ಪ್ರಧಾನಿ ಜತೆ ಚರ್ಚಿಸಿದೆ ಎಂದು ಹೇಳಿದ್ದಾರೆ.

ಶಿಂಜೋ ಅಬೆ ಅವರು ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಜಪಾನ್ ನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com