ಕೊರೋನಾ ನಡುವೆ ಉಗ್ರ ಕೃತ್ಯಕ್ಕೆ ಸಂಚು: ಪಾಕ್, ಬಾಂಗ್ಲಾ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಬಿಎಸ್ಎಫ್ ಗೆ ಅಮಿತ್ ಷಾ ಸೂಚನೆ

ಭಾರತ-ಪಾಕಿಸ್ತಾನ ಮತ್ತು ಭಾರತ-ಬಾಂಗ್ಲಾದೇಶ ಗಡಿಗಳ ನಿರ್ವಹಣೆಯನ್ನು ಪರಿಶೀಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ದೇಶದೊಳಗೆ ಒಳನುಸುಳಲು ಕೊವಿಡ್-19 ಆತಂಕ ಸೂಕ್ತ ಸಮಯವಾಗಿದೆ ಎಂದು ಭಯೋತ್ಪಾದಕ ಸಂಘಟನೆಗಳು ಕಾಯುತ್ತಿರುವುದರಿಂದ ಗಡಿಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಭಾರತ-ಪಾಕಿಸ್ತಾನ ಮತ್ತು ಭಾರತ-ಬಾಂಗ್ಲಾದೇಶ ಗಡಿಗಳ ನಿರ್ವಹಣೆಯನ್ನು ಪರಿಶೀಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ದೇಶದೊಳಗೆ ಒಳನುಸುಳಲು ಕೊವಿಡ್-19 ಆತಂಕ ಸೂಕ್ತ ಸಮಯವಾಗಿದೆ ಎಂದು ಭಯೋತ್ಪಾದಕ ಸಂಘಟನೆಗಳು ಕಾಯುತ್ತಿರುವುದರಿಂದ ಗಡಿಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಸೂಚಿಸಿದ್ದಾರೆ.

ಬಿಎಸ್ಎಫ್ ಕಮಾಂಡ್ ಮತ್ತು ಸೆಕ್ಟರ್ ಹೆಡ್‍ಕ್ವಾರ್ಟರ್ಸ್ ನೊಂದಿಗೆ ಗುರುವಾರ ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಗೃಹಸಚಿವರು, ಗಡಿಯಾಚೆಗಿನ ಚಲವಲನ ತಡೆಯಲು ಗಡಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಬೇಲಿ ಇಲ್ಲದ ಪ್ರದೇಶಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. ಗಡಿ ಪ್ರದೇಶಗಳಲ್ಲಿನ ರೈತರಿಗೆ ಕೊವಿದ್‍-19 ಬಗ್ಗೆ ಅರಿವು ಮೂಡಿಸಬೇಕು. ಈ ಪ್ರದೇಶಗಳಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಮಿತ್ ಶಾ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com