ಏಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಿಸಿ: ಪ್ರಧಾನಿ ಮೋದಿ ಸಭೆಯಲ್ಲಿ ಕೇಜ್ರಿವಾಲ್ ಸಲಹೆ

ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಏಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಿಸಬೇಕೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ.
ಮೋದಿ ಜೊತೆ ಕೇಜ್ರಿವಾಲ್ ವಿಡಿಯೋ ಸಂವಾದ
ಮೋದಿ ಜೊತೆ ಕೇಜ್ರಿವಾಲ್ ವಿಡಿಯೋ ಸಂವಾದ

ನವದೆಹಲಿ: ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಏಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಿಸಬೇಕೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೇಜ್ರಿವಾಲ್ ಈ ಸಲಹೆ ನೀಡಿದ್ದಾರೆ,

21 ದಿನಗಳ ಕಾಲದ ಲಾಕ್ ಡೌನ್ ಏಪ್ರಿಲ್ 14ಕ್ಕೆ ಕೊನೆಯಾಗಲಿರುವ ಹಿನ್ನೆಲೆಯಲ್ಲಿ ಚರ್ಚಿಸಲು ವಿಡಿಯೋ ಕಾನ್ಫರೆನ್ಸ್ ನಲ್ಲಿ, ಕೇವಲ ದೆಹಲಿ ಮಾತ್ರವಲ್ಲದೆ ಇಡೀ ದೇಶಾದ್ಯಂತ ಲಾಕ್ ಡೌನ್ ವಿಸ್ತರಿಸಬೇಕೆಂದು ಕೇಜ್ರಿವಾಲ್ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಕೋವಿಡ್-19 ವಿರುದ್ಧ ದೇಶ ಹೋರಾಡುತ್ತಿರುವಂತೆ 21 ದಿನಗಳ ಕಾಲ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಣೆಯಾಗಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸುವ ಮೂಲಕ ಪ್ರತಿಕ್ರಿಯೆ ಪಡೆದುಕೊಂಡರು.

ಪ್ರಸ್ತುತವಿರುವ ಲಾಕ್‌ಡೌನ್‌ನಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದ್ದು, ಸೇವೆಗಳು ಮತ್ತು ಹೆಚ್ಚಿನ ವರ್ಗದ ಜನರಿಗೂ ವಿನಾಯಿತಿ ನೀಡಬೇಕೆ ಎಂಬ ಬಗ್ಗೆ ರಾಜ್ಯಸರ್ಕಾರಗಳ ಅಭಿಪ್ರಾಯಗಳನ್ನು ಕೇಂದ್ರ ಗೃಹ ಸಚಿವಾಲಯ ಕೋರಿದೆ.

ಲಾಕ್ ಡೌನ್ ಜಾರಿಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿಗೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com