ಲಾಕ್‌ಡೌನ್‌ನ ಹೊಸ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತನ್ನಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಮುಂದಿನ ತಿಂಗಳ 3ನೆ ತಾರೀಕಿನವರೆಗೆ ವಿಸ್ತರಿಸಲ್ಪಟ್ಟ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಹೊಸ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಬುಧವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ(ಯುಟಿ) ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮುಂದಿನ ತಿಂಗಳ 3ನೆ ತಾರೀಕಿನವರೆಗೆ ವಿಸ್ತರಿಸಲ್ಪಟ್ಟ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಹೊಸ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಬುಧವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ(ಯುಟಿ) ಸೂಚನೆ ನೀಡಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು, ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳು ಮತ್ತು ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ದೇಶಾದ್ಯಂತ ಎರಡನೇ ಹಂತದ ಲಾಕ್‌ಡೌನ್‌ಗಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು. ಇದರ ಜೊತೆಗೆ ಸಾರ್ವಜನಿಕರ ಕಷ್ಟಗಳನ್ನು ತಗ್ಗಿಸುವ ದೃಷ್ಟಿಯಿಂದ ರಾಜ್ಯಗಳು ಕೆಲವೊಂದು ವಿನಾಯಿತಿ ನೀಡಬೇಕು. ಪರಿಷ್ಕೃತ ಮಾನದಂಡಗಳಲ್ಲಿ ಉಲ್ಲೇಖಿಸಿರುವಂತೆ ಏಪ್ರಿಲ್ 20 ರಿಂದ ಹೆಚ್ಚುವರಿ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ.

ಆದಾಗ್ಯೂ, ಲಾಕ್‌ಡೌನ್ ಕ್ರಮಗಳ ಕುರಿತು ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಆಧಾರದ ಮೇಲೆ ರಾಜ್ಯಗಳು, ಕೇಂದ್ರಾಡಳಿತ ಮತ್ತು ಜಿಲ್ಲಾಡಳಿತವು ಮಾರ್ಗಸೂಚಿಗಳಲ್ಲಿ ವಿನಾಯಿತಿ ನೀಡಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕಚೇರಿಗಳು, ಕೆಲಸದ ಸ್ಥಳಗಳು, ಕಾರ್ಖಾನೆಗಳು ಮತ್ತು ಸಂಸ್ಥೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತಾ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಇತರ ವಲಯಗಳಲ್ಲಿಯೂ ಇದನ್ನು ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ರಾಜ್ಯಗಳು, ಕೇಂದ್ರಾಡಳಿತ ಮತ್ತು ಜಿಲ್ಲಾಡಳಿತಗಳು ಗುರುತಿಸಿರುವಂತೆ ಹೊಸ ಏಕೀಕೃತ ಪರಿಷ್ಕೃತ ಮಾರ್ಗಸೂಚಿಗಳು ಕಂಟೈನ್‌ಮೆಂಟ್‌ ವಲಯಗಳಲ್ಲಿ ಅನ್ವಯಿಸುವುದಿಲ್ಲ. ಕಂಟೈನ್‌ಮೆಂಟ್‌ ವಲಯದ ವಿಭಾಗದಲ್ಲಿ ಯಾವುದಾದರೂ ಹೊಸ ಪ್ರದೇಶವನ್ನು ಸೇರಿಸಿದ್ದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿಗಳ ಅಡಿಯಲ್ಲಿ ನಿರ್ದಿಷ್ಟವಾಗಿ ಅನುಮತಿಸಲಾದ ಆ ಚಟುವಟಿಕೆಗಳನ್ನು ಹೊರತುಪಡಿಸಿ, ಆ ಪ್ರದೇಶದಲ್ಲಿ ಅನುಮತಿಸಲಾದ ಇತರ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

21 ದಿನಗಳ ಲಾಕ್‌ಡೌನ್ ವಿಸ್ತರಣೆಯ ನಂತರ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮೇ 3 ರವರೆಗೆ ಅದನ್ನು ವಿಸ್ತರಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರವ್ಯಾಪಿ ಲಾಕ್‌ಡೌನ್ 2.0 ಗಾಗಿ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com