ಮಹಾರಾಷ್ಟ್ರ: ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೇ ಕೊರೋನಾ; ಕ್ವಾರಂಟೈನ್'ನಲ್ಲಿರುವಂತೆ 69 ಗರ್ಭಿಣಿಯರಿಗೆ ಸೂಚನೆ

ಮಹಾರಾಷ್ಟ್ರ ರಾಜ್ಯದ ಪುಣೆ ಜಿಲ್ಲೆಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ 69 ಗರ್ಭಿಣಿಯರನ್ನು ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪುಣೆ: ಮಹಾರಾಷ್ಟ್ರ ರಾಜ್ಯದ ಪುಣೆ ಜಿಲ್ಲೆಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ 69 ಗರ್ಭಿಣಿಯರನ್ನು ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ವೈದ್ಯ ರೇಡಿಯೋಲಜಿಸ್ಟ್ ಆಗಿದ್ದು, ನಿನ್ನೆಯಷ್ಟೇ ವೈದ್ಯರಲ್ಲಿ ವೈರಸ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪುಣೆ ಜಿಲ್ಲೆಯ 31 ಗ್ರಾಮಗಳಲ್ಲಿರುವ 69 ಗರ್ಭಿಣಿಯರನ್ನು ಕ್ವಾರಂಟೈನ್ ನಲ್ಲಿರುವಂತೆ ಪುಣೆ ಜಿಲ್ಲಾ ಪರಿಷತ್ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 

ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರೇ ಸ್ವಯಂಪ್ರೇರಿತರಾಗಿ ಪರೀಕ್ಷೆ ನಡೆಸಲು ಆರೋಗ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಇದರಂತೆ ಸ್ವ್ಯಾಬ್ ಟೆಸ್ಟ್ ನಲ್ಲಿ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ. 

ವೈದ್ಯರ ಪುಣೆ ಮೂಲದವರಾಗಿದ್ದು, ಕ್ಲಿನಿಕ್ ನಲ್ಲಿ ಸುಮಾರು 69 ಮಂದಿ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 6,7 ಮತ್ತು 8 ರಂದು ವೈದ್ಯರಿಂದ ಚಿಕಿತ್ಸೆ ಪಡೆದಿದ್ದ ಸುಮಾರು 69ಕ್ಕೂ ಹೆಚ್ಚು ಗರ್ಭಿಣಿಯನ್ನು ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com