ಮಹಾರಾಷ್ಟ್ರ: ಕಾರಿನಲ್ಲಿದ್ದ ಮೂವರನ್ನು ಹೊಡೆದು ಕೊಂದ ಗ್ರಾಮಸ್ಥರು
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಾಡ್ಚಿಂಚಲೆ ಗ್ರಾಮದ ಧಾಬಡಿ-ಖಾನ್ವೆಲ್ ರಸ್ತೆಯಲ್ಲಿ ಕಾರಿನಲ್ಲಿದ್ದ ಮೂವರನ್ನು ಗ್ರಾಮಸ್ಥರು ಹೊಡೆದು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Published: 17th April 2020 03:41 PM | Last Updated: 17th April 2020 03:41 PM | A+A A-

ಸಾಂದರ್ಭಿಕ ಚಿತ್ರ
ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಾಡ್ಚಿಂಚಲೆ ಗ್ರಾಮದ ಧಾಬಡಿ-ಖಾನ್ವೆಲ್ ರಸ್ತೆಯಲ್ಲಿ ಕಾರಿನಲ್ಲಿದ್ದ ಮೂವರನ್ನು ಗ್ರಾಮಸ್ಥರು ಹೊಡೆದು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ಸುಮಾರು ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಲಾಕ್ ಡೌನ್ ಸಮಯದಲ್ಲಿ ಹಳ್ಳಿಗಳಲ್ಲಿ ದರೋಡೆಕೋರರು ಮತ್ತು ಡಕಾಯಿತರು ಸಕ್ರಿಯರಾಗಿದ್ದಾರೆ ಎಂಬ ವ್ಯಾಪಕ ವದಂತಿಗಳು ಕಾರಿನಲ್ಲಿದವರ ಮೇಲೆ ದಾಳಿ ನಡೆಸಲು ಕಾರಣವಾಗಿರಬಹುದು. ಈ ಮೂವರ ಮೇಲೆ ಕಲ್ಲು ಮತ್ತು ಹರಿತವಾದ ಶಸ್ತ್ರಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ಈವರೆಗೆ ಯಾರನ್ನೂ ಬಂಧಿಸಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕಾಸಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂದರಾವ್ ಕಾಳೆ ತಿಳಿಸಿದ್ದಾರೆ.