ಕೊರೋನಾವೈರಸ್: ದೇಶದಲ್ಲಿ ಮತ್ತೆ 1,007 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 13,387ಕ್ಕೆ ಏರಿಕೆ

ದೇಶದಾದ್ಯಂದ ವಿವಿಧ ರಾಜ್ಯಗಳಲ್ಲಿ ಮತ್ತೆ 1,007 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,387ಕ್ಕೆ ಏರಿಕೆಯಾಗಿದೆ. ಇನ್ನು ಗುರುವಾರ ಗುರುವಾರ 27 ಜನರ ಸಾವನ್ನಪ್ಪುವದರೊಂದಿಗೆ ಒಟ್ಟು ಸಾವಿನ ಸಂಖ್ಯೆ 437ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಾದ್ಯಂದ ವಿವಿಧ ರಾಜ್ಯಗಳಲ್ಲಿ ಮತ್ತೆ 1,007 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,387ಕ್ಕೆ ಏರಿಕೆಯಾಗಿದೆ. ಇನ್ನು ಗುರುವಾರ ಗುರುವಾರ 27 ಜನರ ಸಾವನ್ನಪ್ಪುವದರೊಂದಿಗೆ ಒಟ್ಟು ಸಾವಿನ ಸಂಖ್ಯೆ 437ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ 1,749 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ವಿವಿಧ ರಾಜ್ಯಗಳಲ್ಲಿ 11,201 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಮಹಾರಾಷ್ಟ್ರದಲ್ಲಿ ಒಟ್ಟು 3,205 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ ಈಗಾಗಲೇ 194 ಮಂದಿ ಆ ರಾಜ್ಯದಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ದೇಶದಲ್ಲಿ ಅತೀ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಟ್ಟು 1,640 ಪ್ರಕರಣಗಳು, 38 ಮಂದಿ ಸಾವಿಗೀಡಾಗಿದ್ದಾರೆ. 

ತಮಿಳುನಾಡು ರಾಜ್ಯದಲ್ಲಿ 1,267 ಪ್ರಕರಣಗಳು, 15 ಮಂದಿ ಸಾವು, ರಾಜಸ್ತಾನದಲ್ಲಿ 1,131 ಪ್ರಕರಣಗಳು, 3 ಜನರು ಸಾವನ್ನಪ್ಪಿದ್ದಾರೆ. 

ಕರ್ನಾಟಕ ರಾಜ್ಯದಲ್ಲಿ 315 ಸೋಂಕು ಪ್ರಕರಣಗಳು ದಾಖಲಾಗಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ 1,120 ಸೋಂಕು ಪ್ರಕರಣಗಳ ಪೈಕಿ 53 ಮಂದಿ ಬಲಿಯಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 534 ಪ್ರಕರಣಗಳು, 14 ಮಂದಿ ಸಾವು ಹಾಗೂ ತೆಲಂಗಾಣ ರಾಜ್ಯದಲ್ಲಿ 700 ಪ್ರಕರಣಗಳು, 18 ಮಂದಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದಲ್ಲಿ 805 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 13 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com