ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತ ವರದಿ ಸತ್ಯಕ್ಕೆ ದೂರ: ವಿತ್ತ ಸಚಿವಾಲಯ ಸ್ಪಷ್ಟನೆ

ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು, ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ತನ್ನ ನೌಕರರ ನಿವೃತ್ತಿ ವೇತನ (ಪಿಂಚಣಿ)ಯನ್ನು  ಕಡಿತಗೊಳಿಸಲಾಗುತ್ತಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

Published: 19th April 2020 04:33 PM  |   Last Updated: 19th April 2020 04:34 PM   |  A+A-


no proposal to cut govt pensions

ನಿರ್ಮಲಾ ಸೀತಾರಾಮನ್

Posted By : Srinivasamurthy VN
Source : PTI

ನವದೆಹಲಿ: ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು, ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ತನ್ನ ನೌಕರರ ನಿವೃತ್ತಿ ವೇತನ (ಪಿಂಚಣಿ)ಯನ್ನು  ಕಡಿತಗೊಳಿಸಲಾಗುತ್ತಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ಈ ಬಗ್ಗೆ ಕೇಂದ್ರ ವಿತ್ತ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಸರ್ಕಾರಿ ನೌಕರರ ಪಿಂಚಣಿ ಕಡಿತ ಮಾಡುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವಾಲಯ, ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು  ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ನಿವೃತ್ತ ಉದ್ಯೋಗಿಗಳ ಪಿಂಚಣಿ ಕಡಿತ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ನಮ್ಮ ಮುಂದೆ ಇಲ್ಲ ಎಂದು ಹೇಳಿದೆ.

ಹಿರಿಯ ನಾಗರಿಕರು, ವಿಕಲಚೇತನರು ಮತ್ತು ವಿಧವೆಯರು, ಕೇಂದ್ರ ಸರ್ಕಾರದ ಪಿಂಚಣಿ ಪಡೆಯುವ ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮದ (ಎನ್‌ಎಸ್‌ಎಪಿ) ಅಡಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಮೂರು ತಿಂಗಳ ಮುಂಗಡ ಪಿಂಚಣಿ ಪಡೆಯಲಿದ್ದಾರೆ. ಆದರೆ ಸಂಬಳ,  ಪಿಂಚಣಿಯಲ್ಲಿ ಯಾವುದೇ ಕಡಿತವಿಲ್ಲ ಎಂದು ವಿತ್ತ ಸಚಿವಾಲಯ ಹೇಳಿದೆ. 

ಎನ್‌ಎಸ್‌ಎಪಿ ಪ್ರಕಾರ, 80 ವರ್ಷ ಮೇಲ್ಪಟ್ಟವರಿಗೆ ಸಿಗಲಿರುವ ಪಿಂಚಣಿ ಮೊತ್ತದಲ್ಲಿ ಕಡಿತ ಮಾಡಲಾಗಿದೆ. ಮಿಕ್ಕವರಿಗೂ ಇದು ಅನ್ವಯವಾಗಬಹುದು, ಜವಾನ(peon) ನಿಂದ ಮಾಜಿ ರಾಷ್ಟ್ರಪತಿಗಳ ತನಕ ಎಲ್ಲರ  ಪಿಂಚಣಿ ಮೊತ್ತವೂ ಕಡಿತ ಎಂಬ ಸುದ್ದಿಯನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿದ್ದರಿಂದ ಗೊಂದಲ ಉಂಟಾಗಿತ್ತು. ಏಪ್ರಿಲ್ 6ರಂದು ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಸಂಸದರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸುವ ಬಗ್ಗೆ ಮಾತ್ರ ನಿರ್ಣಯ ಕೈಗೊಳ್ಳಲಾಯಿತು ಎಂದು ಪಿಐಬಿ  ಕೂಡಾ ಸ್ಪಷ್ಟಪಡಿಸಿದೆ.

Stay up to date on all the latest ರಾಷ್ಟ್ರೀಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp